Home Posts tagged #vitla (Page 2)

ವಿಟ್ಲ: ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್‌ಗೆ ಕಂಟೈನರ್ ಢಿಕ್ಕಿ, ಹಾನಿ

ವಿಟ್ಲ: ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್ ಗೆ ಕಂಟೈನರ್ ಡಿಕ್ಕಿ ಹೊಡೆದ ಘಟನೆ ಮುಂಜಾನೆ ಮಿತ್ತೂರಿನಲ್ಲಿ ನಡೆದಿದೆ. ಮಿತ್ತೂರು ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್ ಗೆ ಕಾರು ಕೊಂಡೊಯ್ಯುವ ಕಂಟೈನರ್ ಡಿಕ್ಕಿ ಹೊಡೆದಿದ್ದು, ಘಟನೆಯಿಂದಾಗಿ ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್ ಹಾನಿಗೊಳಗಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಕಾರು ಕೊಂಡೊಯ್ಯುತ್ತಿದ್ದ ಕಂಟೈನರ್

ವಿಟ್ಲ ಪಿಎಫ್‍ಐ ಕಾರ್ಯಕರ್ತನ ಮನೆಗೆ ಪೊಲೀಸ್ ದಾಳಿ

ರಾಜ್ಯದ ಲ್ಲಿನ ಪ್ರಮುಖ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ನಿರ್ದೇಶನದಂತೆ ಬಂಟ್ವಾಳ ಹಾಗೂ ವಿಟ್ಲ ಪೊಲೀಸರ ತಂಡ ಮುಂಜಾನೆ ವೇಳೆ ಬೊಳಂತೂರು ವ್ಯಕ್ತಿಯೋರ್ವ ನ ಮನೆಗೆ ದಾಳಿ ನಡೆಸಿ ವಿಚಾರಣೆ ನಡೆಸಿ ಮಾಹಿತಿ ಕಲೆಹಾಕುತ್ತಿದೆ.ಬೊಳಂತೂರು ನಿವಾಸಿ ಮಹಮ್ಮದ್ ಕುಟ್ಟಿ ಎಂಬವರ ಪುತ್ರ ಮಹಮ್ಮದ್ ತಬ್ಸೀರ್ ಎಂಬವರ ಮನಗೆ ಮುಂಜಾನೆ ಮೂರು ಗಂಟೆ ವೇಳೆ ಪೊಲೀಸ್ ದಾಳಿ ನಡೆಸಿದೆ.ಯಾವ ಪ್ರಕರಣಕ್ಕೆ ಎಂಬ ವಿಚಾರವನ್ನು ಇಲ್ಲಿನ ಪೊಲೀಸರು ಮಾಹಿತಿ

ಬಾವಿಗೆ ಬಿದ್ದು ನರಳಾಡುತ್ತಿದ್ದ ಯುವತಿಯ ರಕ್ಷಣೆ

50 ಅಡಿ ಆಳದ ಪಾಳು ಬಾವಿಗೆ ಯುವತಿಯೊಬ್ಬಳು ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡ ಘಟನೆ ಅಳಿಕೆ ಗ್ರಾಮದ ಮೂಡಾಯಿಬೆಟ್ಟು ಎಂಬಲ್ಲಿ ನಡೆದಿದೆ. ಬಾವಿಯೊಳಗೆ ನರಳಾಡುತ್ತಿದ್ದ ಯುವತಿಯ ನರಳಾಟ ಕೇಳಿದ ಸ್ಥಳೀಯರು ತಕ್ಷಣ ಫ್ರೆಂಡ್ಸ್ ವಿಟ್ಲ ತಂಡದ ಮುರಳೀಧರ ಇವರನ್ನು ಸಂಪರ್ಕಿಸಿದ್ದು, ತಕ್ಷಣ ಸ್ಪಂದಿಸಿದ ಮುರಳೀ ವಿಟ್ಲ ಮತ್ತು ತಂಡದವರು ಯುವತಿಯನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಬಳಿಕ ಗಂಭೀರ ಗಾಯಗೊಂಡ ಯುವತಿಯನ್ನು ಮಂಗಳೂರಿನ ದೇರಳಕಟ್ಟೆ ಖಾಸಗಿ

ಆಟೋ ರಿಕ್ಷಾ ಮತ್ತು ಟೆಂಪೋ ನಡುವೆ ಭೀಕರ ಅಪಘಾತ

ವಿಟ್ಲ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಆಟೋ ರಿಕ್ಷಾ ಪಲ್ಟಿ ಹೊಡೆದು ಬಳಿಕ ಟೆಂಪೋ ಟ್ರಾವೆಲ್ಲರ್ ಗೆ ಡಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಧ್ಯೆರಾತ್ರಿ ಸಂಭವಿಸಿದೆ.ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಅಟೋ ರಿಕ್ಷಾ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್ ಬುಡೋಳಿ ವಿಸ್ಡಂ ಶಾಲೆಯ ಎದುರು ಅಪಘಾತ ಸಂಭವಿಸಿದೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಂಜೇಶ್ವರ ನಿವಾಸಿಗಳು ಇಬ್ಬರು ಗಂಭೀರ ಗಾಯಗೊಂಡಿದ್ದು,

ಆ.27ರಿಂದ 31 : ಸುಳ್ಳ ಮಲೆ ತೀರ್ಥ ಸ್ನಾನಕ್ಕೆ ಏಣಿ ಇಡುವ ಸಂಪ್ರದಾಯ

ವಿಟ್ಲ: ಸೋಣ ಅಮವಾಸ್ಯೆಯ ದಿನದಿಂದ ಬಾದ್ರಪದ ಶುಕ್ಲ ಚೌತಿ ಹಬ್ಬದ ದಿನದವರೆಗೆ ಸುಳ್ಳ ಮಲೆ ತೀರ್ಥ ಸ್ನಾನಕ್ಕೆ ಪೂರ್ವಭಾವಿಯಾಗಿ ಬಿದಿರಿನ ಕೇರ್ಪು ( ಏಣಿ) ಇಡುವ ಸಂಪ್ರದಾಯ ನಡೆಯಿತು. ಅನಾಧಿಕಾಲದಿಂದ ನಡೆದು ಬಂದ ಸಂಪ್ರದಾಯದಂತೆ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು. ನಮ್ಮ ತುಳುನಾಡಿನಲ್ಲಿ ಅತ್ಯಂತ ಅಪರೂಪದ ವಿಶಿಷ್ಟ ತೀರ್ಥ ಕ್ಷೇತ್ರ ಎನಿಸಿದ ಐತಿಹಾಸಿಕ ಧಾರ್ಮಿಕ ಹಿನ್ನೆಲೆಯುಳ್ಳ ಸುಳ್ಳಮಲೆ ಗುಹಾ ತೀರ್ಥಕ್ಕೆ ಪ್ರಾರ್ಥನೆ ಸಲ್ಲಿಸಿ,ಕೇರ್ಪು ಇಟ್ಟು

ದೇಶದಲ್ಲಿ ಜನರಿಗೆ ರಾಷ್ಟ್ರ ಪ್ರಜ್ಞೆಯನ್ನು ಬೆಳೆಸುವ ಕೆಲಸವಾಗಬೇಕು : ಕೆಪಿಸಿಸಿ ವಕ್ತಾರ ನಿಕೇತ್‍ರಾಜ್ ಮೌರ್ಯ

ಪುತ್ತೂರು ಮತ್ತು ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಮೃತ ಮಹೋತ್ಸವದ ಪ್ರಯುಕ್ತ ಸೋಮವಾರ ಪುತ್ತೂರು – ದರ್ಬೆಯಿಂದ ವಿಟ್ಲದ ತನಕ ನಡೆದ ಸ್ವಾತಂತ್ರ್ಯೋತ್ಸವ ನಡಿಗೆಯ ಸಮಾರೋಪ ಸಮಾರಂಭ ವಿಟ್ಲದಲ್ಲಿ ನಡೆಯಿತು.ಕೆಪಿಸಿಸಿ ವಕ್ತಾರ ನಿಕೇತ್‍ರಾಜ್ ಮೌರ್ಯ ಅವರು ಸಮಾರೋಪ ಭಾಷಣ ಮಾಡಿ, ಮಾತನಾಡಿ .ದೇಶವನ್ನು ಭಾಷೆ, ಜಾತಿ ಹೆಸರಿನಲ್ಲಿ ಒಡೆಯುವ ಕೆಲಸವಾಗುತ್ತಿದೆ.ದೇಶದಲ್ಲಿ ಜನರಿಗೆ ರಾಷ್ಟ್ರ ಪ್ರಜ್ಞೆಯನ್ನು ಬೆಳೆಸುವ

ರಸ್ತೆ ಬದಿಯ ಹುಲ್ಲು, ಮರದ ಗೆಲ್ಲು ತೆರವು : ಯುವಕೇಸರಿ ಅಬೀರಿ ಸ್ವಚ್ಛತಾ ಶ್ರಮದಾನ

ವಿಟ್ಲ: ಯುವಕೇಸರಿ ಅಬೀರಿ ಅತಿಕಾರಬೈಲು ಚಂದಳಿಕೆ ಸಂಘಟನೆಯ ವತಿಯಿಂದ ಶ್ರಮದಾನ ನಡೆಯಿತು. ಅತಿಕಾರಬೈಲುವಿನಿಂದ ಚಂದಳಿಕೆ ಜಂಕ್ಷನ್ ವರೆಗೆ ಸುಮಾರು 2 ಕಿಲೋ ಮೀಟರ್ ದೂರದ ರಸ್ತೆಯ ಬದಿಯ ಹುಲ್ಲು ಮತ್ತು ಮರದ ಗೆಲ್ಲುಗಳನ್ನು ತೆರವುಗೊಳಿಸುವ ಸ್ವಚ್ಚತಾ ಶ್ರಮದಾನ ನಡೆಯಿತು. ಯುವಕೇಸರಿಯ 40 ಕಿಂತಲೂ ಹೆಚ್ಚು ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದ್ದರು. ವಿವಿಧ ಗ್ರಾಮ ಪಂಚಾಯತ್ ಸದಸ್ಯರು ಈ ಕಾರ್ಯಕ್ಕೆ ಸಾಥ್ ನೀಡಿದರು. ಈ ಸಂಧರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ನ

ವಿಟ್ಲ: ಹಾಳೆ ತಟ್ಟೆ ಕಾರ್ಖಾನೆಯಲ್ಲಿ ಬೆಂಕಿ: ಲಕ್ಷಾಂತರ ರೂ. ನಷ್ಟ

ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಳೆ ತಟ್ಟೆ ತಯಾರಿಕಾ ಘಟಕ ಇಕೋ ವಿಶನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕಟ್ಟಡದ ಮೇಲ್ಭಾಗದಲ್ಲಿ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಫ್ಯಾಕ್ಟರಿ ಯಿಂದ ದಟ್ಟ ಹೊಗೆ ಆವರಿಸುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೆÇಲೀಸರು, ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದರೂ ಕಟ್ಟಡದಲ್ಲಿದ್ದ ಹಲವು ಮೆಷಿನ್, ಮತ್ತು ಹಾಳೆತಟ್ಟೆಗಳು ಸುಟ್ಟು ಕರಕಲಾಗಿದೆ. ಇದರಿಂದ ಲಕ್ಷಾಂತರ

ವಿಟ್ಲದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮ

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ವಿಟ್ಲ ಇದರ ವತಿಯಿಂದ ಮಹಿಳಾ ಘಟಕದ ನೇತೃತ್ವದಲ್ಲಿ ಆಟಿಡೊಂಜಿ ದಿನ ವಿಟ್ಲದ ಶಾಂತಿನಗರ ಅಕ್ಷಯ ಸಭಾಭವನದಲ್ಲಿ ನಡೆಯಿತು. ಪುತ್ತೂರು ಉಪತಹಶೀಲ್ದಾರ್ ಸುಲೋಚನಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು. ಸತ್ಕಾರ್ಯಗಳಿಗೆ ಸ್ಪಂದಿಸಬೇಕು. ಹಳ್ಳಿಯಲ್ಲಿ ಮಳೆಗಾಲಕ್ಕೆ ಅವಶ್ಯವಿರುವ ವಿವಿಧ ವಸ್ತುಗಳನ್ನು ಸಂಗ್ರಹಿಸಿಡುವುದು ವಾಡಿಕೆ. ಆಟಿ ತಿಂಗಳ ಕಾಲಕ್ಕೆ ಇದು

ವಿಟ್ಲ: ಕೆಟ್ಟು ನಿಂತ ಅಡುಗೆ ಎಣ್ಣೆ ಸಾಗಾಟದ ಟ್ಯಾಂಕರ್ , ಕಿಲೋಮೀಟರ್ ಸಾಲು ನಿಂತ ವಾಹನಗಳು

ವಿಟ್ಲ: ಇಲ್ಲಿನ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುವಲ್ಲಿ ರಸ್ತೆಯ ಮಧ್ಯೆ ಅಡುಗೆ ಎಣ್ಣೆ ಸಾಗಾಟದ ಟ್ಯಾಂಕರ್ ಕೆಟ್ಟು ನಿಂತಿದ್ದರ ಪರಿಣಾಮ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲಾಗಿ ನಿಂತಿದೆ,ಸ್ಥಳದಲ್ಲಿ ಪೋಲಿಸರು ಮತ್ತು ಸೂರಿಕುಮೇರು ಪರಿಸರದ ಯುವಕರು ವಾಹನಗಳ ಸಂಚಾರಕ್ಕೆ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸುತ್ತಿದ್ಸಾರೆ