ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಟ್ಲದ ಸಿಂಹಗಿರಿ ಲಯನ್ಸ್ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷ ಸುದೇಶ್ ಭಂಡಾರಿ ಎರ್ಮೆನಿಲೆ, ಕಾರ್ಯದರ್ಶಿ ಜಲಜಾಕ್ಷಿ ಬಾಲಕೃಷ್ಣ, ಕೋಶಾಧಿಕಾರಿ ರವಿಶಂಕರ್ ಅವರಿಗೆ ಲಯನ್ಸ್ ಕ್ಲಬ್ ಪ್ರಥಮ ಉಪರಾಜ್ಯಪಾಲ ಮೆಲ್ವಿನ್ ಡಿ ಸೋಜ ಪದಗ್ರಹಣಆ ನಡೆಸಿಕೊಟ್ಟರು. ಬಳಿಕ ಮಾತನಾಡಿದ ಅವರು ವಿಟ್ಲ
ವಿಟ್ಲ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಹಳೀರಾದಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ 20ರಿಂದ 30 ಜನರ ಮೇಲೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಸೂರಿಕುಮೇರಿ ನಿವಾಸಿ ಮಹಮ್ಮದ್ ಹನೀಫ್ (43), ಹಳಿರಾ ನಿವಾಸಿ ಜಗದೀಶ್ (25) ಬಂಧಿತರು. ನ.೧೨ರಂದು ಬೆಂಗಳೂರು ಕಡೆಯ ಶಿಫ್ಟ್ ಕಾರು ಹಾಗೂ ಉಪ್ಪಿನಂಗಡಿ ಕಡೆಯ ಇನ್ನೋವಾ ನಡುವೆ ಅಪಘಾತವಾಗಿ,
ವಿಟ್ಲದಲ್ಲಿ ಕೇಂದ್ರ ಕಚೇರಿ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಸಂಸ್ಥೆ ವಿಜ್ಞಾನಿಗಳ ನೇತೃತ್ವದಲ್ಲಿ ಅಡಿಕೆ ಮತ್ತು ತೆಂಗಿನ ಮರಗಳಿಗೆ ಬಾಧಿಸುತ್ತಿರುವ ಹಳದಿ ರೋಗದ ವಿರುದ್ಧ ಹೋರಾಡಲು ಸಜ್ಜಾಗುವ ಮೂಲಕ ರೈತರ ಕಷ್ಟಗಳಿಗೆ ಸ್ಪಂದಿಸಲು ಮುಂದಾಗಿದೆ ದ.ಕ ಜಿಲ್ಲೆಯಾದ್ಯಂತ ಅಡಿಕೆ ಮರಗಳಿಗೆ ಹಳದಿ ರೋಗ ಬಾಧಿಸಿದ್ದರಿಂದ ಜಿಲ್ಲೆಯ ರೈತರು ಅಡಿಕೆ ಕೃಷಿಯಿಂದ ಹಿಂದೆ ಸರಿಯಲು ಮುಂದಾಗುತ್ತಿದ್ದಾರೆ. ಈಗಾಗಲೇ ಅಡಿಕೆ ಗಿಡಗಳಲ್ಲಿ ಹಳದಿ ರೋಗ ಕಂಡು
ವಿಟ್ಲ: ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡು ಮನೆ ಹಾನಿಗೊಂಡ ಘಟನೆ ಅಳಿಕೆ ಗ್ರಾಮ ಕಲ್ಲೆಂಚಿನಪಾದೆ ಎಂಬಲ್ಲಿ ಸಂಭವಿಸಿದೆ. ಅಳಿಕೆ ಗ್ರಾಮ ಕಲ್ಲೆಂಚಿನಪಾದೆ ಶೀನ ನಳಿಕೆ ಅವರಿಗೆ ಸೇರಿದ ಮನೆಗೆ ರಾತ್ರಿ ಭಾರೀ ಪ್ರಮಾಣ ಸಿಡಿಲು ಬಡಿದಿದೆ. ಇದರಿಂದ ಶೀನ ನಳಿಕೆ, ಅವರ ಪತ್ನಿ ಸುಶೀಲ, ಮಕ್ಕಳಾದ ವಿದ್ಯಾ ಮತ್ತು ವಿನಯ ಅವರು ಗಾಯಗೊಂಡಿದ್ದಾರೆ. ಘಟನೆಯ ತೀವ್ರತೆಗೆ ಮನೆಯ ಗೋಡೆಯನ್ನು ಸೀಳಿಕೊಂಡು ಸಿಡಿಲು ಪ್ರವೇಶಿಸಿದ್ದರಿಂದ ಗೋಡೆ ಸಂಪೂರ್ಣವಾಗಿ ಬಿರುಕು ಬಿಟ್ಟಿದೆ.
ವಿಟ್ಲ: ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರರೋರ್ವರು ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿಮಧ್ಯೆ ಮೃತಪಟ್ಟ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ನಡೆದಿದೆ ನಿಡ್ಪಳ್ಳಿ ಗ್ರಾಮದ ವಾಲ್ತಾಜೆ ನಾರಾಯಣ ನಾಯ್ಕ್ ರವರ ಪುತ್ರ, ರಿಬ್ಕೋ ಟ್ರೇಡಿಂಗ್ ಕಂಪೆನಿಯ ನೌಕರ ಸುರೇಶ್ ನಾಯ್ಕ್ ಮೃತ ದುರ್ದೈವಿ. ಬೆಳಿಗ್ಗೆ ಸ್ಥಳೀಯ ನಿವಾಸಿಯೋರ್ವರು ಆಟೋ ರಿಕ್ಷಾವೊಂದರಲ್ಲಿ ಮಿತ್ತೂರಿಗೆ ಹಾಲು
ವಿಟ್ಲ: ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದ ಮನೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ರವರ ಮಗಳು ನಿಶ್ಮಿತಾ(22) ಎಂದು ಗುರುತಿಸಲಾಗಿದೆ.ನಿಶ್ಮಿತಾ ರವರು ಡೆಂಟಲ್ ಕ್ಲಿನಿಕ್ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ ಸಂಜೆಯಿಂದ ಕಾಣೆಯಾಗಿದ್ದಳು ಈ ಬಗ್ಗೆ ವಿಟ್ಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಅ.11 ರಂದು
ವಿಟ್ಲ: ಕೊಳ್ನಾಡು ಗ್ರಾಮದ ಕೆ.ಪಿ ಬೈಲು ನಾರ್ಶ ಎಂಬಲ್ಲಿ ಮೀನಿನ ವ್ಯಾಪಾರಿಯೊಬ್ಬರನ್ನು ಅಪರಿಚಿತರ ತಂಡವೊಂದು ಅಪಹರಣ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಕೊಳ್ನಾಡು ಗ್ರಾಮದ ಕೆ ಪಿ ಬೈಲು ನಾರ್ಶ ನಿವಾಸಿ ಮಹಮ್ಮದ್ ಅನ್ಸಾರ್(34) ಅಪಹರಣಗೊಳಗಾದ ವ್ಯಕ್ತಿಯಾಗಿದ್ದು, ಈ ಬಗ್ಗೆ ಅವರ ಪತ್ನಿ ಅಪ್ಸ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೊಹಮ್ಮದ್ ಅನ್ಸಾರ್ (31) ಎಂಬವರು ಮೀನಿನ ವ್ಯಾಪಾರದಲ್ಲಿ ನಷ್ಟ ಉಂಟಾಗಿ ಬೇರೆ
ವಿಟ್ಲ: ಉಡುಪಿ ಕಾಸರಗೋಡು 400ಕೆವಿ ವಿದ್ಯುತ್ ಮಾರ್ಗ ಸದ್ಯದ ಮಾಹಿತಿಯಂತೆ ವಿಟ್ಲ ಪಟ್ಟಣ ಪಂಚಾಯಿತಿಯ 4-5 ವಾರ್ಡ್ ಗಳಲ್ಲಿ ಹಾದುಹೋಗುತ್ತಿದೆ. ಕೃಷಿಕರಿಗೆ ಹಾಗೂ ಹಲವಾರು ಜಮೀನು ಮಾಲೀಕರಿಗೆ ಸಮಸ್ಯೆಯಾಗುತ್ತಿದ್ದರೂ, ಈ ಬಗ್ಗೆ ಶಾಸಕರಾಗಲಿ, ಈ ಭಾಗದ ಜನಪ್ರತಿನಿಧಿಗಳಾಗಲೀ ಸಂತ್ರಸ್ತ ಜನರ ಪರವಾಗಿ ಧ್ವನಿ ಎತ್ತುತ್ತಿಲ್ಲ ಎಂದು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ ಆರೋಪಿಸಿದರು. ಬಂಟ್ವಾಳ ತಾಲೂಕಿನಲ್ಲಿ ಅಗಾಧ ಪ್ರಮಾಣದಲ್ಲಿ ರೈತರಿಗೆ
ಸೂರಿಕುಮೇರು ಸೈಂಟ್ ಜೋಸೆಪ್ ಚರ್ಚ್ ನಲ್ಲಿ ಕೋವಿಡ್ ನಿಯಮ ಪಾಲಿಸಿಕೊಂಡು ಬಹಳ ಸರಳ ರೀತಿಯಲ್ಲಿ ತೆನೆ ಹಬ್ಬ ಆಚರಿಸಲಾಯಿತು. ಫಾದರ್ ಗ್ರೆ ಗರಿ ಪಿರೇರಾ ದಿವ್ಯ ಬಲಿ ಪೂಜೆಯ ನೇತೃತ್ವ ವಹಿಸಿದ್ದರು. ಕಥೊಲಿಕ್ ಸಭಾ ಸೂರಿಕುಮೇರು ಬೊರಿಮಾರ್ ಘಟಕದ ಅಧ್ಯಕ್ಷರಾದ ಸ್ಟೀವನ್ ಮಾರ್ಟಿಸ್ ರವರ ಮಾರ್ಗದರ್ಶನದಲ್ಲಿ ಭಕ್ತಾದಿಗಳಿಗೆ ಕಬ್ಬು ಹಂಚಲಾಯಿತು. ಇನ್ನು ಫಾತಿಮಾ ಮಾತೆಯ ದೇವಾಲಯ ಪೆರುವಾಯಿಯಲ್ಲೂ ಕೂಡ ಕೋವಿಡ್ ಮುನ್ನಚ್ಚರಿಕೆಗಳೊಂದಿಗೆ ಸರಳಾವಾಗಿ ಮೋಂತಿ ಹಬ್ಬ
ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೇರಳ ಗಡಿ ಭಾಗದಲ್ಲಿ ಸಾಲೆತ್ತೂರು ಗ್ರಾಮದ ವಾಲ್ತಾಜೆ ಪರಂಬೋಕು ಹೊಳೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ ಹತ್ತು ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಾಲೆತ್ತೂರು ಗ್ರಾಮದ ವಾಲ್ತಾಜೆ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರವಾಗಿ ಮರಳು ನಡೆಸಲು ತಯಾರಿ ಮಾಡುತ್ತಿದ್ದ ಬಗ್ಗೆ ದಾಳಿ ನಡೆಸಲಾಗಿದೆ. ಈ ಸಂದರ್ಭ ಸೊತ್ತುಗಳಾದ ಹಿಟಾಚಿ-1,



















