ವಿಟ್ಲ: ಬೋರ್ ವೆಲ್ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ವಿಟ್ಲದ ಕಾಶಿಮಠದಲ್ಲಿ ನಡೆದಿದೆ. ಉಕ್ಕುಡ ಆಲಂಗಾರು ನಿವಾಸಿ ರಂಜಿತ್(20) ಮೃತಪಟ್ಟವರು. ವಿಟ್ಲ ಕಡೆಯಿಂದ ಉಕ್ಕುಡ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಎದುರಿನಿಂದ ಬಂದ ಬೋರ್ ವೆಲ್ ಲಾರಿ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಸವಾರ ಸ್ಥಳದಲ್ಲೇ
ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಗ್ರಂಥಪಾಲಕರಾಗಿ ಕಾರ್ಯನಿರ್ವಹಿಸುತ್ತಿರುವ ಲೋಕರಾಜ್ ವಿಟ್ಲ ಅವರು ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ ವಿಭಾಗದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿಯನ್ನು ನೀಡಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಗ್ರಂಥಪಾಲಕ ಡಾ. ಪುರುಷೋತ್ತಮ ಗೌಡ ಅವರ ಮಾರ್ಗದರ್ಶನದಲ್ಲಿ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ ವಿಭಾಗದಲ್ಲಿ ಮಂಡಿಸಿದ ಕಮ್ಯೂನಿಟಿ ಇನ್ಪಾರ್ಮೇಶನ್ ಸರ್ವೀಸಸ್ ಟು ದ ರೂರಲ್
ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಧಾರ್ಮಿಕ ಸಭೆ ನಡೆಯಿತು.ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ ಗ್ರಾಮದ ಐಕ್ಯತೆಯಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಕ್ಷೇತ್ರಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುವ ರೀತಿಯ ಕೆಲಸ ಕಾರ್ಯಗಳು ನಡೆಯಬೇಕು ಎಂದು ಹೇಳಿದರು. ಬಾಯಾರು ಚಿತ್ರಮೂಲ
ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಭಾನುವಾರ ನಡೆಯಿತು.ಭಾನುವಾರ ಬೆಳಿಗ್ಗೆ 48 ನಾರಿಕೇಳ ಮಹಾಗಣಪತಿ ಹೋಮ ನಡೆಯಿತು. ಮಧ್ಯಾಹ್ನ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆಯನ್ನು ವಿಟ್ಲ ಅರಮನೆಯ ಅನುವಂಶಿಕ ಆಡಳಿತದಾರ ಬಂಗಾರು ಅರಸರು ಉದ್ಘಾಟಿಸಿದರು. ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆ ವಿಟ್ಲದಿಂದ ಕುದ್ದುಪದವು-
ಫೆಬ್ರವರಿ 18 ರಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಮೊದಲ ಬುಡೋಕನ್ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ವಿಟ್ಲದ ಕಳೆದ 30 ವರ್ಷಗಳಿಂದ ವಿಠಲ ಸುವರ್ಣ ರಂಗ ಮಂದಿರದಲ್ಲಿ ತರಬೇತಿ ನೀಡುತ್ತಿರುವ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ಅಳಿಕೆ ಇವರ ವಿಧ್ಯಾರ್ಥಿಗಳು ಭಾಗವಹಿಸಿದ್ದಾರೆ.ವಿಜೇತ ಮಕ್ಕಳ ಹೆಸರು ಈ ಕೆಳಗಿನಂತಿವೆ, ವಿಟ್ಲ ಜೇಸೀಸ್ ಸ್ಕೂಲ್ 1.ಧ್ರುವ ಕಟಾ:1st ಕುಮಿಟೆ:1st 2.ಸಾನ್ವಿ ಕಟಾ:3rd ಕುಮಿಟೆ:3rd 3.ಮನಸ್ವಿ ಬಿ ಕುಮಿಟೆ:3rd
ವಿಟ್ಲ: ಸಾಲೆತ್ತೂರು ಸಮೀಪದ ಮೆದು ಎಂಬಲ್ಲಿನ ಪೆಟ್ರೋಲ್ ಬಂಕ್ ಎದುರುಗಡೆ ನಿಲ್ಲಿಸಿದ್ದ ಬಾರೀ ಗಾತ್ರದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಲಾರಿಯ ಮುಂದಿನ ಭಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಪೆಟ್ರೋಲ್ ಬಂಕಿನ ಎದುರು ಈ ಘಟನೆ ನಡೆದಿದ್ದು, ಈ ಸಂದರ್ಬದಲ್ಲಿ ಸ್ಥಳೀಯರು ಹರಸಾಹಸಪಟ್ಟು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವೊಂದನ್ನು ತಪ್ಪಿಸಿದ್ದಾರೆ. ಬಂಟ್ವಾಳ ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ತಳಕ್ಕಾಗಮಿಸಿದ್ದಾರೆ.
ವಿಟ್ಲ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದೆ. ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬವರ ಮನೆ ಬೆಂಕಿಗಾಹುತಿಯಾಗಿದೆ. ದೀಪ ಅವರು ಮನೆಯಲ್ಲಿ ಒಬ್ಬರೆ ಇದ್ದಾಗ ಈ ಘಟನೆ ಸಂಭವಿಸಿದ್ದು, ಬೆಂಕಿ ಕಾಣಿಸುತ್ತಿದ್ದಂತೆ ಅವರು ಹೊರಗಡೆ ಓಡಿ ಹೋಗಿದ್ದಾರೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಇದರ ಶಬ್ದದಿಂದ ಮಾಣಿ ಜನತೆ ಬೆಚ್ಚಿ
ವಿಟ್ಲ: ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ಸಂಭವಿಸಿದೆ. ವಿಟ್ಲ ಒಕ್ಕೆತ್ತೂರು ನಿವಾಸಿ ಬಶೀರ್ ಅವರ ಪುತ್ರಿ ಫಾತಿಮತ್ ನಿದಾ ಗಾಯಗೊಂಡ ವಿದ್ಯಾರ್ಥಿನಿಯಾಗಿದ್ದು, ಈಕೆ ವಿಟ್ಲ ಸರಕಾರಿ ಮಾದರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆಗೆ ಹೋಗಲು ಒಕ್ಕೆತ್ತೂರಿನಲ್ಲಿ ಆಟೋ ರಿಕ್ಷಾಕ್ಕೆ ಕಾಯುತ್ತಿದ್ದಾಗ ವಿಟ್ಲ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದು
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಗಾಂಧಿನಗರ ಮಾಳಮೂಲೆ ಸಂಪರ್ಕ ರಸ್ತೆಯಲ್ಲಿರುವ ತೋಡಿಗೆ ಸೇತುವೆಗೆ ಅನುದಾನ ಬಿಡುಗಡೆಯಾದರೂ ಇದುವರೆಗೂ ಕಾಮಗಾರಿ ನಡೆಸಿಲ್ಲ ಎಂದು ಗ್ರಾಮಸ್ಥರು ಪಂಚಾಯತ್‍ಗೆ ಭೇಟಿ ತಹಶೀಲ್ದಾರ್‍ಗೆ ಮನವಿ ಸಲ್ಲಿಸಿದರು.ಇಲ್ಲಿಗೆ ಸೇತುವೆ ಮಂಜೂರಾಗಿದ್ದು, ಇದರಲ್ಲಿ ರಾಜಕೀಯ ಮಾಡಲಾಗುತ್ತಿದೆ. ಮಳೆಗಾಲದ ಮೊದಲು ಅದನ್ನು ಪೂರ್ಣ ಮಾಡಬೇಕೆಂದು ಬಂಟ್ವಾಳ ತಹಸೀಲ್ದಾರ ಡಾ. ಸ್ಮಿತಾ ರಾಮ್ ಅವರಿಗೆ ಸ್ಥಳೀಯ ಫಲಾನುಭವಿಗಳು ಮನವಿ
ವಿಟ್ಲ: ಪುಣಚ ಗ್ರಾಮದ ನೆಲ್ಲಿಗುಡ್ಡೆ ಜರಿಮೂಲೆ ಸಮೀಪ ಹೊಂಡದಲ್ಲಿ ಮೃತದೇಹ ಹಾಗೂ ಮೊಬೈಲ್ ಪತ್ತೆಯಾದ ಘಟನೆ ನಡೆದಿದೆ. ಸೊಪ್ಪು ಸೌದೆ ತರಲು ಗುಡ್ಡಕ್ಕೆ ಹೋದ ಸ್ಥಳೀಯ ನಿವಾಸಿಗಳಿಗೆ ಮೊಬೈಲ್ ಪತ್ತೆಯಾಗಿದೆ. ಇದನ್ನು ಗಮನಿಸಿ ಅಕ್ಕಪಕ್ಕದ ನೋಡಿದಾಗ ಮೃತದೇಹ ಪತ್ತೆಯಾಗಿದ್ದು, ಭಯಗೊಂಡು ಓಡಿಹೋಗಿದ್ದಾರೆನ್ನಲಾಗಿದೆ. ಪಕ್ಕದಲ್ಲಿರುವ ಮರದಲ್ಲಿ ಬಳ್ಳಿಯೊಂದು ನೇತಾಡುತ್ತಿದ್ದು, ಮೃತದೇಹ ನೆಲದಲ್ಲಿ ಬಿದ್ದುಕೊಂಡಿದೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ