ವಿಟ್ಲ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ. ಅಳಕೆಮಜಲು ನಿವಾಸಿ ಧೀರಜ್ (30) ಮೃತಪಟ್ಟ ವ್ಯಕ್ತಿ. ಧೀರಜ್ ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಪತ್ನಿ
ವಿಟ್ಲ: ಕಾರ್ಯಕರ್ತರು ಮಾಡಿದ ಕೆಲಸಕ್ಕೆ ಹೃದಯದಲ್ಲಿ ಜಾಗವನ್ನು ನೀಡಲಾಗಿದೆ. ಜನರ ಮನಸ್ಸಿನಲ್ಲಿ ಹಲವು ನಿರೀಕ್ಷೆಗಳಿದ್ದು, ಚುನಾವಣೆಯಲ್ಲಿ ಗೆದ್ದ ಬಳಿಕ ಪ್ರತಿಯೊಂದು ನಡೆಯಲ್ಲೂ ಜವಾಬ್ದಾರಿ ಹೆಚ್ಚಿದೆ. ಭ್ರಷ್ಟಾಚಾರ ಮುಕ್ತ ಮಾಡುವ ಕಾರ್ಯಕ್ಕೆ ಕೈಹಾಕಿದ್ದು, ಯಾರೊಬ್ಬರೂ ಹಣ ನೀಡುವ ಅಗತ್ಯವಿಲ್ಲ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಮಂಗಳವಾರ ವಿಟ್ಲ ಚರ್ಚ್ ಸಮೀಪದ ಶತಮಾನೋತ್ಸವ ಸಮುದಾಯ ಭವನದಲ್ಲಿ ವಿಟ್ಲ – ಉಪ್ಪಿನಂಡಿ ಬ್ಲಾಕ್
ಮಾಣಿಯಲ್ಲಿ ನಡೆದ ಗಲಾಟೆಯಲ್ಲಿ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಸಂಸದ ನಳಿನ್ ಕುಮಾರ್ ಕಟೀಲು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮತ್ತು ಹರಿಕೃಷ್ಣ ಬಂಟ್ವಾಳ್ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಪೊಲೀಸ್ ವರಿಷ್ಟಾಧಿಕಾರಿಯನ್ನು ಪೋನ್ ಮುಖಾಂತರ ಸಂಪರ್ಕ ಮಾಡಿ ಆರೋಪಿಗಳನ್ನು ತಕ್ಷಣ ಬಂಧಿಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ
ವಿಟ್ಲ: ಕೊಳ್ನಾಡು ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಶ್ರೀ ಮಹಾಮ್ಮಾಯೀ ದೇವೀ ಹಾಗೂ ಪರಿವಾರ ದೈವಗಳ ಟ್ರಸ್ಟ್ ವತಿಯಿಂದ ಮೇ 23ರಿಂದ 29ರ ವರೆಗೆ ಶ್ರೀ ಕ್ಷೇತ್ರ ಕಟ್ಟತ್ತಿಲದಲ್ಲಿ ಶ್ರೀ ಮಹಾಮ್ಮಾಯೀ ದೈವದ ಪುನರ್ ಪ್ರತಿಷ್ಠೆ ಬ್ರಹ್ಮಕಲಶ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೇಶವ ನಾಯ್ಕ್ ದೈಪಲ ಮತ್ತು ಟ್ರಸ್ಟ್ ಅಧ್ಯಕ್ಷ ರವೀಂದ್ರನಾಥ ಕೆ.ಮುಳ್ಳೇರಿಯ ತಿಳಿಸಿದರು. ವಿಟ್ಲದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸುಮಾರು 400 ವರ್ಷಗಳ
ವಿಟ್ಲದ ವಿಠ್ಠಲ್ ಜೇಸೀಸ್ ಆಂಗ್ಲ ಮಾದ್ಯಮ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನ ದಾಖಲಾತಿ ಪ್ರಾರಂಭಗೊಂಡಿದೆ. 2023-24 ನೇ ಸಾಲಿನ ನರ್ಸರಿ, ಶಿಶುವಿಹಾರ, ಪ್ರಾಥಮಿಕ ವಿಭಾಗ, ಪ್ರೌಢ ವಿಭಾಗದ ದಾಖಲು ಪ್ರಾರಂಭವಾಗಿದೆ. ಗುಣಾತ್ಮಕ ಶಿಕ್ಷಣ , ಸೃಜನಾತ್ಮಕ ಕ್ರೀಯಾಶೀಲ ಕಲಿಕೆ, ಆರೋಗ್ಯಕರ ವಾತಾವರಣ, ಸುಸಜ್ಜಿತ ಸಭಾಭವನ, ಹೊರ ಮತ್ತು ಒಳಾಂಗಣ ಕ್ರೀಡಾ ಚಟುವಟಿಕೆಗಳು, ಸುಸಜ್ಜಿತ ವಿಜ್ಞಾನ ಮತ್ತು ಗಣಕಶಾಸ್ತ್ರ ಪ್ರಯೋಗಾಲಯಗಳು, ಪೌಷ್ಟಿಕಾಂಶಯುಕ್ತ ಮಧ್ಯಾಹ್ನ ಊಟ
ಸತತ ನೂರು ಶೇ. ಸಾಧನೆಯ ಪ್ರತಿಷ್ಠಿತ ಶಾಲೆ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಬಸವನ ಗುಡಿ ವಿಟ್ಲ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿಟ್ಲ 2023ರ SSLC ಪರೀಕ್ಷೆಯಲ್ಲಿ ಸತತ 20ನೇ ಬಾರಿ 100% ಫಲಿತಾಂಶ. ತಸ್ಮಯಿ ಯಸ್ ಶೆಟ್ಟಿ 616 ಹಾಗೂ ಸಾತ್ವಿಕ್ ಕೃಷ್ಣ ಕೆ. ಯನ್ 614 ಅಂಕ ಹಾಜರಾದ 91 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು 600ಕ್ಕಿಂತ ಹೆಚ್ಚು ಅಂಕ ಗಳಿಕೆ 37 ವಿದ್ಯಾರ್ಥಿಗಳು A+, 29ವಿದ್ಯಾರ್ಥಿಗಳು – […]
ವಿಟ್ಲ: ಕಳೆದ ಐದು ವರುಷದ ಅವಧಿಯ ಆಡಳಿತ ಅನುಭವ ಹೊಂದಿರುವ ಬಂಟ್ವಾಳ ಕ್ಷೇತ್ರದ ಮತದಾರರು ಮತ್ತೊಮ್ಮೆ ರಮಾನಾಥ ರೈಯವರನ್ನು ಕ್ಷೇತ್ರದ ಶಾಸಕರನ್ನಾಗಿ ಆಯ್ಕೆ ಮಾಡುವ ನಿರ್ಧಾರದಲ್ಲಿದ್ದಾರೆ ಎಂದು ಬಂಟ್ವಾಳ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಚುನಾವಣಾ ಉಸ್ತುವಾರಿಯಾಗಿರಯವ ಪಂಚಾಯತ್ ರಾಜ್ ಘಟಕದ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲುರವರು ಹೇಳಿದರು. ಅವರು ಕೊಳ್ನಾಡು ವಲಯ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಚುನಾವಣೆ
ವಿಟ್ಲ: ಬೋರ್ ವೆಲ್ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ವಿಟ್ಲದ ಕಾಶಿಮಠದಲ್ಲಿ ನಡೆದಿದೆ. ಉಕ್ಕುಡ ಆಲಂಗಾರು ನಿವಾಸಿ ರಂಜಿತ್(20) ಮೃತಪಟ್ಟವರು. ವಿಟ್ಲ ಕಡೆಯಿಂದ ಉಕ್ಕುಡ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಎದುರಿನಿಂದ ಬಂದ ಬೋರ್ ವೆಲ್ ಲಾರಿ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಅಪಾಯದಿಂದ ಪಾರಾಗಿದ್ದಾರೆ. ಸ್ತಳಕ್ಕೆ ವಿಟ್ಲ ಪೆÇಲೀಸರು ಭೇಟಿ ನೀಡಿದ್ದಾರೆ
ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಗ್ರಂಥಪಾಲಕರಾಗಿ ಕಾರ್ಯನಿರ್ವಹಿಸುತ್ತಿರುವ ಲೋಕರಾಜ್ ವಿಟ್ಲ ಅವರು ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ ವಿಭಾಗದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿಯನ್ನು ನೀಡಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಗ್ರಂಥಪಾಲಕ ಡಾ. ಪುರುಷೋತ್ತಮ ಗೌಡ ಅವರ ಮಾರ್ಗದರ್ಶನದಲ್ಲಿ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ ವಿಭಾಗದಲ್ಲಿ ಮಂಡಿಸಿದ ಕಮ್ಯೂನಿಟಿ ಇನ್ಪಾರ್ಮೇಶನ್ ಸರ್ವೀಸಸ್ ಟು ದ ರೂರಲ್
ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಧಾರ್ಮಿಕ ಸಭೆ ನಡೆಯಿತು.ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ ಗ್ರಾಮದ ಐಕ್ಯತೆಯಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಕ್ಷೇತ್ರಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುವ ರೀತಿಯ ಕೆಲಸ ಕಾರ್ಯಗಳು ನಡೆಯಬೇಕು ಎಂದು ಹೇಳಿದರು. ಬಾಯಾರು ಚಿತ್ರಮೂಲ



























