Home Posts tagged # Vittla

ವಿಟ್ಲ: ಜುಗಾರಿ ಅಡ್ಡೆಗೆ ದಾಳಿ ನಡೆಸಿದ ವಿಚಾರದಲ್ಲಿ ಹಣ ಬೇಡಿಕೆ ಒಡ್ಡಿದ ಆರೋಪ – ವಿಟ್ಲ ಎಸೈ ಕೌಶಿಕ್ ಕರ್ತವ್ಯದಿಂದ ಅಮಾನತು

ದಿನಾಂಕ 08.05.2025 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿ ಆಡುವ ಬಗ್ಗೆ ಮಾಹಿತಿ ದೊರೆತ ಮೇರೆಗೆ, ಸದ್ರಿ ಸ್ಥಳಕ್ಕೆ ಕೌಶಿಕ್ ಬಿ ಸಿ, ಪಿ ಎಸ್ ಐ, ವಿಟ್ಲ ಪೊಲೀಸ್ ಠಾಣೆ ರವರು ದಾಳಿ ಮಾಡಿದಾಗ, ಘಟನಾ ಸ್ಥಳದಲ್ಲಿ ಜುಗಾರಿ ಆಟದಲ್ಲಿ ತೊಡಗಿದ್ದವರು ಪತ್ತೆಯಾಗದಿದ್ದು, ಸ್ಥಳದಲ್ಲಿ ಮೋಟಾರು ಸೈಕಲ್ ಕಂಡುಬಂದಿರುತ್ತದೆ. ಪಿ ಎಸ್ ಐ ಕೌಶಿಕ್

ಮಂಗಳೂರು: ತುಳು ಮತ್ತು ಕನ್ನಡ ರಂಗಭೂಮಿ ಕಲಾವಿದ ಸುರೇಶ್ ವಿಟ್ಲ ನಿಧನ

ತುಳು ರಂಗ ಭೂಮಿ ಹಾಗೂ ಶಾರದಾ ಆರ್ಟ್ಸ್ ಮಂಜೇಶ್ವರದ ಕಲಾವಿದ ಸುರೇಶ್ ವಿಟ್ಲ ನಿಧನ ಹೊಂದಿದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪ್ರಸ್ತುತ ಶಾರದ ಆರ್ಟ್ಸ್ ಮಂಜೇಶ್ವರ ತಂಡದ ಬಹು ಬೇಡಿಕೆಯ ಕಲಾವಿದರಾದ ಇವರು ತುಳು ಕನ್ನಡ ರಂಗಭೂಮಿಯ ಮೂಲಕ ತನ್ನ ಅಭಿನಯ

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲದ ಮುಳಿಯ ತಾಳಿಪಡ್ಪು ನಿವಾಸಿ ಲಾರಿ ಚಾಲಕ ಲಿಯೋ ಡಿಸೋಜ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅವಿವಾಹಿತರಾಗಿದ್ದ ಲಿಯೋ ಅವರು ಅಣ್ಣನ ಜೊತೆ ವಾಸವಿದ್ದರು ಊಟದ ಬಳಿಕ ಕೋಣೆಗೆ ತೆರಳಿದ್ದ ಲಿಯೋ ಅವರು ಬಾಗಿಲು ತೆರೆಯದ ಹಿನ್ನಲೆ ಒಳಗೆ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ

ವಿಟ್ಲ: ಜೋಕಾಲಿಗೆ ಕುತ್ತಿಗೆ ಸಿಲುಕಿ ಬಾಲಕಿ ಸಾವು

ವಿಟ್ಲ: ಆಟವಾಡುತ್ತಿದ್ದ ವೇಳೆ ಜೋಕಾಲಿಗೆ ಕುತ್ತಿಗೆ ಸಿಲುಕಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಇದೊಂದು ಆತ್ಮಹತ್ಯೆ ಎಂದು ತಿಳಿದು ಬಂದಿದೆ ಈ ಬಗ್ಗೆ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶೇರಾ ಶಾಲೆಯ ಮೂರನೇ ತರಗತಿಯ ವಿದ್ಯಾರ್ಥಿನಿ ಮಡಲ ನಿವಾಸಿ ಕಿಶೋರ್ ರವರ ಪುತ್ರಿ ತೀರ್ಥಶ್ರೀ (8) ಮೃತಪಟ್ಟ ಬಾಲಕಿ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ವಿಟ್ಲ ಪೊಲೀಸರು ಬಾಲಕಿಯ

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಓಂ ಸಾಯಿ ಇಂಡಸ್ಟ್ರೀಸ್ ನ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಎಂದು ಗುರುತಿಸಲಾಗಿದೆ. ಮೃತರು ಇಬ್ಬರು ಮಕ್ಕಳನ್ನು ಮತ್ತು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಕಾರು

ವಿಟ್ಲ: ಕಂಬಳಬೆಟ್ಟು ಮುಖ್ಯ ರಸ್ತೆಗೆ ಏಕಾಏಕಿ ಆಗಮಿಸಿದ ಬೈಕ್ ತಪ್ಪಿಸಲು ಪ್ರಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಬೈಕ್ ಗಳಿಗೆ ಡಿಕ್ಕಿಯಾಗಿ ಮಣ್ಣಿನ ದಿಬ್ಬದ ಮೇಲೆ ಮಗುಚಿ ಬಿದ್ದಿದೆ. ಬೈಕ್ ಸವಾರ ಅರ್ಕೆಜಾಲು ನಿವಾಸಿ ಯತೀಶ ಗಾಯಗೊಂಡಿದ್ದಾರೆ. ಕಾರು ಚಾಲಕ ಬೊಳಂತಿಮೊಗರು ನಿವಾಸಿ ಸನನ್ ಅಪಾಯದಿಂದ ಪಾರಾಗಿದ್ದಾರೆ. ವಿಟ್ಲ ಕಬಕ ರಸ್ತೆಯ ಕಂಬೆಟ್ಟುವಿನಲ್ಲಿ ಅರ್ಕೆಜಾಲು ಒಳ ರಸ್ತೆಯಿಂದ ಮುಖ್ಯ ರಸ್ತೆಗೆ ನುಗ್ಗಿದ ಬೈಕ್ ಗೆ ನಿಯಂತ್ರಣ ಕಳೆದುಕೊಂಡ ಕಾರು

ವಿಟ್ಲ: 94 ಹಕ್ಕು ಪತ್ರ ವಿಚಾರ: ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ದಾಂಧಲೆ ನಡೆಸಿದ ವ್ಯಕ್ತಿಗಳು

ವಿಟ್ಲ: ಮನೆ ಅಡಿಸ್ಥಳದ ಹಕ್ಕು ಪತ್ರ ಪಡೆಯುವ ವಿಚಾರದಲ್ಲಿ ನಿರೀಕ್ಷಕರ ಕಛೇರಿಯಲ್ಲಿ ಕೆಲವು ವ್ಯಕ್ತಿಗಳು ಮೇಜಿನ ಗಾಜು ಪುಡಿ ಮಾಡಿ ದಾಂಧಲೆ ನಡೆಸಿದ ಘಟನೆ ವಿಟ್ಲದ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಬಂದೋಬಸ್ತು ಕಲ್ಪಿಸಿದ್ದಾರೆ.ವೀರಕಂಬ ನಿವಾಸಿ ಶೇಖ್ ಶಿಬಾನ್ ಎಂಬರು ಇತ್ತೀಚೆಗೆ ಸರ್ಕಾರಿ ಜಾಗದಲ್ಲಿ ನೂತನ ಮನೆ ನಿರ್ಮಾಣ ಮಾಡಿದ್ದರು. ಅಡಿಸ್ಥಳವನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವ ನಿಟ್ಟಿನಲ್ಲಿ 94ಸಿ ಅಡಿಯಲ್ಲಿ

ಸಾಲೆತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ

ಸಾಲೆತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಭಾಗಶ: ಜಖಂಗೊಂಡ ಘಟನೆ ಸಾಲೆತ್ತೂರು ಜಂಕ್ಷನ್‌ನಲ್ಲಿ ನಡೆದಿದೆ. ಮುಡಿಪು ಕಡೆಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಟೊಯೊಟಾ ಅರ್ಬನ್ ಕ್ರೂಸರ್ ಕಾರು ಸಾಲೆತ್ತೂರು ಜಂಕ್ಷನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ಭಾರಿ ಗಾತ್ರದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಭಾಗಶ: ಜಖಂಗೊಂಡಿದ್ದು ಅಪಘಾತದ

ವಿಟ್ಲ: ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ಗೌಡ ನಿಧನ

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ನಡೆದಿದೆ. ಕುಂಡಡ್ಕ ನಿವಾಸಿ ಉಮೇಶ್ ಗೌಡ (38)ಮೃತ ವ್ಯಕ್ತಿ. ಕೃಷಿಕರಾಗಿದ್ದ ಉಮೇಶ್ ರವರಿಗೆ ನಿನ್ನೆ ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೃತರು ತಾಯಿ, ಅಣ್ಣ ತಮ್ಮಂದಿರನ್ನು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

ವಿಟ್ಲದಲ್ಲಿ ಕಾಲೇಜ್ ಬಸ್ ಮತ್ತು ಬೈಕ್ ನಡುವೆ ಅಪಘಾತ

ವಿಟ್ಲ: ಮಡಿಕಲ್ ಕಾಲೇಜಿನ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್ಸಿನಲ್ಲಿದ್ದ ಮಹಿಳಾ ಸಿಬ್ಬಂದಿಗಳು ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳಪದವು ಅನಂತಾಡಿ ರಸ್ತೆಯ ಸುರುಳಿಮೂಲೆ ಎಂಬಲ್ಲಿ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಬಸ್ ರಸ್ತೆ ಬದಿಯ ಪ್ರಪಾತದ ಬಳಿ ಸಿಕ್ಕಿಹಾಕಿಕೊಂಡಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಮೂವರು ಸ್ಟಾಪ್ ನರ್ಸ್ ಮತ್ತು ಬೈಕ್ ಸವಾರ