ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರಿನ ರಾಷ್ಟ್ರೀಯ ಆಯುಷ್ ಮಿಷನ್ ಸಂಯುಕ್ತ ಆಯುಷ್ ಆಸ್ಪತ್ರೆಯನ್ನು ಸೆ.25ರ ಶನಿವಾರ ನಗರದ ವೆನ್‍ಲಾಕ್ ಆಯುಷ್ ಆಸ್ಪತ್ರೆಯ ಆವರಣದಲ್ಲಿಕೇಂದ್ರ ಸರಕಾರದ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ಆಯುಷ್ ಸಚಿವರಾದ ಸರ್ಬಾನಂದ ಸೋನೋವಾಲ್ ಅವರು ಲೋಕಾರ್ಪಣೆ ಮಾಡಿದರು. ಮಂಗಳೂರು ದಕ್ಷಿಣ ವಿಧಾನ ಸಭಾ
ರಾಷ್ಟ್ರೀಯ ಆಯುಷ್ ಮಿಷನ್ ಯೋಜನೆಯ ಅಡಿಯಲ್ಲಿ ವೆನ್ಲಾಕ್ ಆವರಣದಲ್ಲಿ ಆಯುಷ್ ಸಂಯುಕ್ತ ಆಸ್ಪತ್ರೆಯ ಉದ್ಘಾಟನಾ ಸಮಾರಂಭವು ಸೆ.25ರಂದು ಸಂಜೆ 3.30ಕ್ಕೆ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ ಅಧಿಕಾರಿ ಡಾ. ಮಹಮ್ಮದ್ ಇಕ್ಬಾಲ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕೇಂದ್ರ ಸರ್ಕಾರದ ಆಯುಷ್ ಸಂಪುಟ ದರ್ಜೆ ಸಚಿವರಾದ ಸರ್ಬಾನಂದ ಸೋನೋವಾಲ್ ಅವರು ಆಯುಷ್ ಸಂಯುಕ್ತ ಆಸ್ಪತ್ರೆಯನ್ನು
ಮುಖ್ಯಮಂತ್ರಿಯಾದ ಬಳಿಕ ಮೊಟ್ಟ ಮೊದಲ ಬಾರಿಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಬಸವರಾಜ ಬೊಮ್ಮಾಯಿ ಭೇಟಿ ಕೊಟ್ಟಿದ್ದಾರೆ. ಇಂದು ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆಯಲ್ಲಿ ಸಿಎಂ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಬೊಮ್ಮಾಯಿ ಅವರಿಗೆ ಆರತಿ ಬೆಳಗಿ ಹಣೆಗೆ ತಿಲಕ ಇಟ್ಟು ಶುಭ ಕೋರಿದರು. ತದ ನಂತರ ನಗರದ ವೆನ್‍ಲಾಕ್ ಜಿಲ್ಲಾಆಸ್ಪತ್ರೆಗೆ ಭೇಟಿ ನೀಡಿದ ಅವರು ಆಸ್ಪತ್ರೆಯ ಮೆಡಿಸನ್
ಮಂಗಳೂರು : ಉರ್ವ ಪೊಲೀಸ್ ಠಾಣೆಗೆ ಬಂದ ಮೂವರು ಅಲ್ಲಿನ ಸಿಬ್ಬಂದಿಯ ಜೊತೆಗೆ ಅನುಚಿತವಾಗಿ ವರ್ತಿಸಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಈ ಪ್ರಕರಣದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನ ಉರ್ವ ಠಾಣೆ ವ್ಯಾಪ್ತಿಯ ಅಪಾರ್ಟ್‍ಮೆಂಟ್‍ನಲ್ಲಿ ನಿರ್ವಹಣೆ ಶುಲ್ಕ ಕೊಡುವುದು ಹಾಗೂ ನೀರಿನ ಸಂಪರ್ಕ ಒದಗಿಸುವ ಕುರಿತು ಗಲಾಟೆ ನಡೆದಿತ್ತು. ಈ ಬಗ್ಗೆ ಮೇ ತಿಂಗಳಲ್ಲಿ ಎರಡು ಪ್ರತ್ಯೇಕ ಪ್ರಕರಣ