ತಲಪಾಡಿ-ಚೆಂಗಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ರಿಟರ್ನ್ ಹಾಲ್ ಬಿರುಕು

ಮಂಜೇಶ್ವರ: ತಲಪಾಡಿ-ಚೆಂಗಳ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ ಸಾಗುತ್ತಿರುವ ಮಧ್ಯ ತಲಪ್ಪಾಡಿಯಿಂದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿರ್ಮಿಸಿರುವ ರಿಟರ್ನ್ ಹಾಲ್ ಬಿರುಕು ಬಿಟ್ಟಿರುವುರಾಗಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಯಾವುದೇ ಮಾಹಿತಿ ನೀಡದೆ ಕಾಮಗಾರಿ ಮುಂದುವರಿಸುತ್ತಿರುವ ಗುತ್ತಿಗೆದಾರರು ಬಿರುಕು ಬಿಟ್ಟಿರುವ ಬಗ್ಗೆ ಸ್ಥಳೀಯರ ಪ್ರಶ್ನೆಗಳಿಗೆ ಸ್ಪಂದಿಸದಿರುವುದು ಜನರ ಆತಂಕ ಹೆಚ್ಚಿಸಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಗಳು ಹಾಗೂ ನಿರ್ಮಾಣ ಕಾಮಗಾರಿಗಳು, ರಸ್ತೆಯ ಇಕ್ಕೆಲಗಳಲ್ಲಿ ರಕ್ಷಣಾ ಗೋಡೆಗಳ ನಿರ್ಮಾಣದಿಂದಾಗಿ ರಸ್ತೆಯ ಪೂರ್ವ-ಪಶ್ಚಿಮ ಭಾಗದ ಜನರು ಸಮೀಪದ ದೇಗುಲ, ಶಾಲೆ, ಅಂಗನವಾಡಿಗಳಿಗೆ ತೆರಳಲು ಕಿಲೋಮೀಟರ್ ಗಟ್ಟಲೆ ಸಂಚರಿಸಬೇಕಾಗಿದೆ. ಇದರ ವಿರುದ್ಧ ಸ್ಥಳೀಯರು ಧರಣಿ ಸಮಿತಿ ರಚಿಸಿಕೊಂಡು ಧರಣಿ ನಡೆಸಲು ಸಿದ್ಧತೆ ನಡೆಸಿದ್ದಾರೆ
