ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆ ಹಿನ್ನೆಲೆ : ಗಡಿ ಪ್ರದೇಶ ತಲಪಾಡಿಯಲ್ಲಿ ಪೊಲೀಸರಿಂದ ತಪಾಸಣೆ
ಉಳ್ಳಾಲ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯ ಬಳಿಕ ಗಡಿಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ತಲಪಾಡಿ ಗಡಿಯಲ್ಲಿ ಕೇರಳದಿಂದ ಮಂಗಳೂರು ಕಡೆಗೆ ಆಗಮಿಸುತ್ತಿರುವ ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು , ಮಂಗಳೂರಿನಿಂದ ಕೇರಳ ಕಡೆಗೆ ಸಂಚರಿಸುವ ವಾಹನಗಳನ್ನು ಕೇರಳ ಪೊಲೀಸರು ತಪಾಸಣೆ ಆರಂಬಿಸಿದ್ದಾರೆ,.
ಕೇರಳ – ಕರ್ನಾಟಕ ಗಡಿಭಾಗವಾಗಿರುವ ತಲಪಾಡಿ, ದೇವಿಪುರ, ನೆತ್ತಿಲಪದವು ಬಳಿ ತಪಾಸಣೆ ನಡೆಸುತ್ತಿದ್ದು, ನೆತ್ತಿಲಪದವು ಕೆದುಂಬಾಡಿಯಲ್ಲಿ ಕೊಣಾಜೆ ಪೊಲೀಸರು ತಪಾಸಣೆ ನಡೆಸಿದರೆ, ರಾಷ್ಟ್ರೀಯ ಹೆದ್ದಾರಿ66 ತಲಪಾಡಿಯಲ್ಲಿ ಉಳ್ಳಾಲ ಪೆÇಲೀಸರು ಮಂಗಳೂರು ಕಡೆಗೆ ಆಗಮಿಸುವ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದು, ಮಂಜೇಶ್ವರ ಪೊಲೀಸರು ತಲಪಾಡಿಯಲ್ಲಿ ಮಂಗಳೂರಿನಿಂದ ಕೇರಳ ಕಡೆ ಸಂಚರಿಸುವ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ. ತಲಪಾಡಿಯಲ್ಲಿ ಸುಮಾರು 20ಕ್ಕೂ ಹೆಚ್ಚು ಉಳ್ಳಾಲ, ಕೆಎಸ್‍ಆರ್ಪಿ ಮತ್ತು ಸಂಚಾರಿ ಪೆÇಲೀಸರು ತಪಾಸಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.