ತಲಪಾಡಿ : RTO ಕಚೇರಿಗೆ ಲೋಕಾಯುಕ್ತ ದಾಳಿ

ಉಳ್ಳಾಲ: ತಲಪಾಡಿ ಆರ್ ಟಿ ಓ ಕಚೇರಿಗೆ ಲೋಕಾಯುಕ್ತ ಎಸ್.ಪಿ ಲಕ್ಷ್ಮೀಗಣೇಶ್ ನೇತೃತ್ವದ ತಂಡ ದಾಳಿ ನಡೆಸಿ ಸತತ ಮೂರು ಗಂಟೆಗಳಿಂದ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಕೇರಳ – ಕರ್ನಾಟಕ ಗಡಿಭಾಗ ಮೇಲಿನ ತಲಪಾಡಿಯಲ್ಲಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ, ತಲಪಾಡಿ ತನಿಖಾ ಠಾಣೆಗೆ ಲೋಕಾಯುಕ್ತ ದಾಳಿ ನಡೆಸಿದೆ. ಲಾರಿ ಚಾಲಕರಿಂದ ಲಂಚ ಪಡೆಯುವ ಆರೋಪಗಳು ಈ ಹಿಂದೆ ಹಲವು ಬಾರಿ ವ್ಯಕ್ತವಾಗಿತ್ತು. ಈ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿರುವುದಾಗಿ ತಿಳಿದುಬಂದಿದೆ. ಸಂಜೆ 7 ಗಂಟೆಗೆ ತಂಡ ದಾಳಿ ನಡೆಸಿ ರಾತ್ರಿ 11 ರ ವರೆಗೆ ಚೆಕ್ ಪೆÇೀಸ್ಟ್ ಒಳಗಡೆ ದಾಖಲೆಗಳನ್ನು ಪರಿಶೀಲಿಸುತ್ತಿದೆ.

Related Posts

Leave a Reply

Your email address will not be published.