ತಲಪಾಡಿ ಟೋಲ್ ಸಿಬ್ಬಂದಿ ಗೂಂಡಾಗಿರಿ : ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಉಳ್ಳಾಲ: ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ಭಾನುವಾರ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ.
ಕೇರಳ ಗಡಿಭಾಗದ ತಲಪಾಡಿ ಟೋಲ್ ಗೇಟ್ ನಲ್ಲಿ ಘಟನೆ ನಡೆದಿದ್ದು ಕರ್ನಾಟಕ -ಕೇರಳ ಗಡಿಭಾಗ ತಲಪಾಡಿಯಲ್ಲಿರುವ ಕೊನೆಯ ಟೋಲ್ ಗೇಟ್ ಇದಾಗಿದೆ. ಹಲ್ಲೆ ಮಾಡುವ ದೃಶ್ಯವನ್ನು ವಾಹನ ಸವಾರರು ಸೆರೆಹಿಡಿದಿದ್ದು ಕಾರು ಚಾಲಕರು ಕೇರಳ ಮೂಲದವರೆಂದು ತಿಳಿದುಬಂದಿದೆ.
ಕಾರ್ ನಲ್ಲಿದ ಕುಟುಂಬಸ್ಥರ ಮುಂದೆನೆ ಟೋಲ್ ಸಿಬ್ಬಂದಿಗಳು ಹಲ್ಲೆ ನಡೆಸಿದ್ದು ಇವರ ಗೂಂಡ ವರ್ತನೆಗೆ ವಾಹನ ಸವಾರರು ಹಾಗೂ ಸಾರ್ವಜನಿಕರು ಟೋಲ್ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಪರಸ್ಪರ ಹಲ್ಲೆ ನಡೆದಿದ್ದು
ಕಾರು ಚಾಲಕನನ್ನ ಹಿಡಿದು ಸಿಬ್ಬಂದಿಗಳು ಥಳಿಸಿದ್ದಾರೆ. .
ಈ ಘಟನೆ ಉಳ್ಳಾಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೀಡೀಯೋ ವೈರಲ್ ಆಗಿದೆ. ಈ ಘಟನೆ ಕುರಿತು ಈ ವರೆಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ವರದಿಯಾಗಿದೆ.
