ಸರಕಾರಿ ಪದವಿ ಪೂರ್ವ ಕಾಲೇಜು, ಉದ್ಯಾವರದಲ್ಲಿ ಇಂದು ದಿನಾಂಕ 29-06-2026 ರಂದು ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ವಿಜಯ್ ಕುಮಾರ್ ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಜಿತೇಂದ್ರ ಶೆಟ್ಟಿ, ಉಡುಪಿ ಟೆಂಪಲ್ ಸಿಟಿ ಲೀಜನ್ ನ ಸುಶೀಲ್ ಕುಮಾರ್, ಚಿತ್ರಕುಮಾರ್, ಬಿಲ್ಲವ ಸಂಘದ ಯೋಗೇಶ್ ಕೋಟ್ಯಾನ್, ಪ್ರಾಂಶುಪಾಲರಾದ ಕೃಷ್ಣಮೂರ್ತಿ ಹಾಗೂ ಗಣ್ಯರು, ಸಹ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


