ತಲ್ಲೂರು ನಾರಾಯಣ ವಿಶೇಷ ಮಕ್ಕಳ ಶಾಲೆ-ಡಿ.ವೈ.ರಾಘವೇಂದ್ರ ಹುಟ್ಟು ಹಬ್ಬ ಆಚರಣೆ
ನಾರಾಯಣ ವಿಶೇಷ ಮಕ್ಕಳ ಶಾಲೆ ತಲ್ಲೂರು ಇಲ್ಲಿ ಬೈಂದೂರು ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ನೇತೃತ್ವದಲ್ಲಿ ಶಿವಮೊಗ್ಗ ಸಂಸದರಾದ ಡಿ. ವೈ. ರಾಘವೇಂದ್ರ ಅವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು.
ಈ ಸಂದರ್ಭ ಮಕ್ಕಳಿಗೆ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷ ಊಟದ ವ್ಯವಸ್ಥೆಯನ್ನು ಮಾಡಲಾಯಿತು.
ಗುರುರಾಜ ಶೆಟ್ಟಿ ಗಂಟಿಹೊಳೆ ಮಾತನಾಡಿ ವಿಶೇಷ ಮಕ್ಕಳ ಸಂಸ್ಥೆ ನಡೆಸುವುದು ಸುಲಭದ ಕೆಲಸವಲ್ಲ. ಅದಕ್ಕೆ ಬಧ್ಧತೆ ಬೇಕು ಮತ್ತು ವಿಶೇಷ ಮಕ್ಕಳಿಗೆ ಬದುಕು ರೂಪಿಸಿಕೊಳ್ಳಲು ಶಿಕ್ಷಕರು ನಡೆಸುತ್ತಿರುವ ಕಾರ್ಯ ಶ್ಲಾಘನೀಯ ಎಂದರು.
ವಿಶೇಷ ಮಗು ಅನುರಾಗ್ ನಾಯಕ್ ಹುಟ್ಟು ಹಬ್ಬದ ಶುಭಾಶಯ ಗೀತೆ ಹಾಡಿ ಸಂಸದರಿಗೆ ಶುಭಾಶಯಗಳನ್ನು ಅರ್ಪಿಸಿದರು.
ಈ ಸಂದರ್ಭದಲ್ಲಿ ಸುಮುಖ ಜಿಲ್ಲಾ ಉಪಾಧ್ಯಕ್ಷರಾದ ಸದಾನಂದ ಉಪ್ಪಿನಕುದ್ರು, ಸುಮ್ಮಖ ಸರ್ಜಿಕಲ್ ಸುರೇಶ್ ಶೆಟ್ಟಿ, ತಾಲೂಕು ಪಂಚಾಯತ್‍ನ ಮಾಜಿ ಸದಸ್ಯರಾದ ಕರಣ್ ಕುಮಾರ್, ತಲ್ಲೂರು ಪಂಚಾಯತ್ ಉಪಾಧ್ಯಕ್ಷರಾದ ಗಿರೀಶ್ ನಾಯ್ಕ್ ಮತ್ತು ಇತರ ಪಂಚಾಯತ್ ಸದಸ್ಯರು, ನಾರಾಯಣ ವಿಶೇಷ ಮಕ್ಕಳ ಶಾಲೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.