ಟ್ಯಾಂಕರ್ ಬೈಕ್ ಗೆ ಡಿಕ್ಕಿ – ಬೈಕ್ ಸವಾರ ಮೃತ್ಯು

ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೊಪ್ಪಲಂಗಡಿ ಬಳಿ ನಡೆದಿದೆ.

ಮಂಗಳೂರುನಿಂದ ಉಡುಪಿ ಕಡೆ ಹೋಗತ್ತಿದ್ದ ಟ್ಯಾಂಕರ್ ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಬೈಕ್ ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡು ಮೃತ ಪಟ್ಟಿದ್ದು ಹರೀಶ್ ಕುಮಾರ್(45) ಮೃತ ದುರ್ದೈವಿ.

ಟ್ಯಾಂಕರ್ ಚಾಲಕನ ನಿರ್ಲಕ್ಷದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ.ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published.