ದ.ಕ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ
ಆ್ಯಂಕರ್: ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ಮತ್ತು ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ನವೀನ್ ಕುಮಾರ್ ಎಂ.ಕೆ ಅವರು ಉದ್ಘಾಟಿಸಿದ್ರು. ತದ ಬಳಿಕ ಮಾತನಾಡಿದ ಅವರು, ಬುದ್ಧಿಶಕ್ತಿ ಹೆಚ್ಚಳ, ಬೆಳವಣಿಗೆ, ದೈಹಿಕ ಮತ್ತು ಮಾನಸಿಕ ಸಮತೋಲನ ಕಾಯ್ದುಕೊಳ್ಳುವುದಕ್ಕೆ ಕ್ರೀಡೆ ವಿದ್ಯಾರ್ಥಿಗಳ ಜೀವನದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ. ಸಂಘಟಿತ, ಸ್ಪರ್ಧಾತ್ಮಕ ಮನೋಭಾವ ಬೆಳೆಯಲು ಕ್ರೀಡೆ ಸಹಕಾರಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿ ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಖೇಲ್ ಪ್ರಮುಖ್ ಕರುಣಾಕರ ಎಂ. ಮಾತನಾಡಿ ಆರೋಗ್ಯಕರ ಜೀವನಕ್ಕೆ ಕ್ರೀಡೆಗಳು ಅಡಿಪಾಯ ಹಾಕಿ ಕೊಟ್ಟಿವೆ. ಕ್ರೀಡೆ ಮನುಷ್ಯನ ಜೀವನ ಹಾಗೂ ದೈಹಿಕ, ಮಾನಸಿಕ ಸಂಪೂರ್ಣ ಬೆಳವಣಿಗೆಗೆ ಅತ್ಯವಶ್ಯಕ. ದೀರ್ಘಕಾಲದ ಆರೋಗ್ಯ ಭಾಗ್ಯಕ್ಕೆ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಪ್ರಧಾನವಾಗಿದೆ ಎಂದರು.ಕಾರ್ಯಕ್ರಮದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಡಾ. ಕೃಷ್ಣಪ್ರಸನ್ನ ಅಧ್ಯಕ್ಷತೆಯನ್ನು ವಹಿಸಿದರು. ಸಮಾರಂಭದಲ್ಲಿ ವಿವೇಕಾನಂದ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ರವಿಶಂಕರ್ ವಿ.ಎಸ್, ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಉಪಸ್ಥಿತರಿದ್ದರು.
