HomeFresh Newsಉಡುಪಿ ಶ್ರೀ ಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ: ತೆಲಂಗಾಣ ಸರ್ಕಾರದ ಪರಿಶಿಷ್ಟ ಜಾತಿಗಳ ಅಭಿವೃದ್ಧಿ, ಬುಡಕಟ್ಟು ಕಲ್ಯಾಣ, ವಿಕಲಚೇತನರು, ಹಿರಿಯ ನಾಗರಿಕರು ಹಾಗೂ ಅಲ್ಪಸಂಖ್ಯಾತರ ಸಬಲೀಕರಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಅವರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.

ಶ್ರೀ ಕೃಷ್ಣ ಮಠಕ್ಕೆ ಆಗಮಿಸಿದ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಅವರು ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರ್ಯಾಯ ಶ್ರೀ ಶೀರೂರು ಮಠಕ್ಕೆ ಭೇಟಿ ನೀಡಿದ ಅವರನ್ನು ಶ್ರೀ ಮಠದ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಹಾಗೂ ವೆಂಕಟರಮಣ ಮುಚ್ಚಿಂತ್ತಾಯ ಉಪಸ್ಥಿತರಿದ್ದರು.

swarna sep
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments