HomeFresh Newsಮಂತ್ರಾಲಯದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಕಾರ್ಯದರ್ಶಿ ರವಿಚಂದ್ರ...

ಮಂತ್ರಾಲಯದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ ಮೃ*ತ್ಯು

ಮಂಗಳೂರು: ಇಂದು ನಸುಕಿನ ಜಾವ ಮಂತ್ರಾಲಯದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಕೇಂದ್ರೀಯ ಘಟಕದ ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ ಅಶೋಕನಗರ ಅವರು ಮೃತಪಟ್ಟಿದ್ದಾರೆ.

ಟ್ರಸ್ಟ್‌ನ ಸ್ಥಾಪಕರಾದ ಸತೀಶ್ ಶೆಟ್ಟಿ ಪಟ್ಲ ಹಾಗೂ ಇತರ ಪದಾಧಿಕಾರಿಗಳು ಎರಡು ಕಾರುಗಳಲ್ಲಿ ತಿರುಪತಿ ಮತ್ತು ಮಂತ್ರಾಲಯ ಯಾತ್ರೆಗೆ ತೆರಳಿದ್ದರು ಎಂದು ತಿಳಿದು ಬಂದಿದೆ. ತಿರುಪತಿಯಿಂದ ಮಂತ್ರಾಲಯದತ್ತ ಪ್ರಯಾಣಿಸುತ್ತಿದ್ದ ವೇಳೆ ಸತೀಶ್ ಶೆಟ್ಟಿ ಪಟ್ಲ ಪ್ರಯಾಣಿಸುತ್ತಿದ್ದ ಕಾರು ಸುರಕ್ಷಿತವಾಗಿ ತಲುಪಿದೆ.

ಇನ್ನೊಂದು ಕಾರಿನಲ್ಲಿ ರವಿಚಂದ್ರ ಶೆಟ್ಟಿ ಸೇರಿದಂತೆ ನಾಲ್ವರು ಪ್ರಯಾಣಿಸುತ್ತಿದ್ದು, ಮಂತ್ರಾಲಯದಿಂದ ಸುಮಾರು 10 ನಿಮಿಷ ದೂರದಲ್ಲಿದ್ದಾಗ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.ಕಾರನ್ನು ಪ್ರದೀಪ್ ಆಳ್ವ ಕದ್ರಿ ಅವರು ಚಲಾಯಿಸುತ್ತಿದ್ದರು ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಹಿಂಬದಿ ಆಸನದಲ್ಲಿದ್ದ ರವಿಚಂದ್ರ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಪುರುಷೋತ್ತಮ್ ಭಂಡಾರಿ ಅವರ ಎರಡೂ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಸಿಎ ಸುದೇಶ್ ಕುಮಾರ್ ಹಾಗೂ ಚಾಲಕ ಪ್ರದೀಪ್ ಆಳ್ವ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments