ಉಳ್ಳಾಲ: ಭಾರೀ ಮಳೆಗೆ ತಲಪಾಡಿಯ ಖಾಸಗಿ ಕಾಲೇಜಿನ ಬೃಹತ್ ಮೇಲ್ಛಾವಣಿ ಕುಸಿತ

ಉಳ್ಳಾಲ: ಭಾರೀ ಮಳೆಗೆ ತಲಪಾಡಿ ಖಾಸಗಿ ಶಿಕ್ಷಣ ಸಂಸ್ಥೆಯ ಬೃಹತ್ ಮೇಲ್ಛಾವಣಿ ಕುಸಿದುಬಿದ್ದು, ಹಲವು ವಾಹನಗಳು ಜಖಂ ಆಗಿವೆ. ರಜೆಯಿದ್ದ ಹಿನ್ನೆಲೆ ವಿದ್ಯಾರ್ಥಿಗಳಿಲ್ಲದೆ ಯಾವುದೇ ದುರಂತ ಸಂಭವಿಸಿಲ್ಲ.

ದೇವಿನಗರದ ಖಾಸಗಿ ಕ್ಯಾಂಪಸ್ ಒಳಗಿನ ಆರು ಅಂತಸ್ತಿನ ಶಾಲಾ ಕಟ್ಟಡದ ಮೇಲೆ ಇತ್ತೀಚೆಗೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಛಾವಣಿ ಉರುಳಿ ಕೆಳಗೆ ಬಿದ್ದಿದೆ. ಶೀಟ್ ಅಳವಡಿಸಲು ಹಾಕಲಾಗಿದ್ದ ಭಾರೀ ಗಾತ್ರದ ಕಬ್ಬಿಣದ ಸಲಾಕೆಗಳು ಕೆಳಗೆ ಉರುಳಿ ಬಿದ್ದು ಅನೇಕ ವಾಹನಗಳು ಜಖಂ ಗೊಂಡಿವೆ. ಜಿಲ್ಲಾಡಳಿತ ಶಾಲಾ, ಕಾಲೇಜುಗಳಿಗೆ ರಜೆ ನೀಡಿದ್ದರಿಂದ ವಿದ್ಯಾರ್ಥಿಗಳು ಶಾಲೆಗೆ ಬಂದಿರಲಿಲ್ಲ. ಹಾಗಾಗಿ ಸಂಭಾವ್ಯ ಅನಾಹುತ ತಪ್ಪಿದೆ.
