ಕುಟುಂಬ ಸಮೇತ ಮಂಜುನಾಥ ಸ್ವಾಮಿಯ ದರ್ಶನ ಪಡೆದ ರಾಜ್ಯಪಾಲರು

ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಫೆ15ರ ಬುಧವಾರ ನವಜೀವನ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪತ್ನಿ ಅನಿತಾ ಗೆಹ್ಲೋಟ್ ಸೇರಿದಂತೆ ಮೊಮ್ಮಕ್ಕಳೊಂದಿಗೆ ಶ್ರೀ ಮಂಜುನಾಥ್ ಸ್ವಾಮಿಯ ದರ್ಶನ ಪಡೆದರು.

Thawar Chand Gehlot

ದೇವಸ್ಥಾನದ ಆಡಳಿತ ಮಂಡಳಿ ರಾಜ್ಯಪಾಲರಿಗೆ ಸ್ವಾಗತ ಕೋರಿದರು. ಗೌರವಾನ್ವಿತ ರಾಜ್ಯಪಾಲರು ಮತ್ತು ಪತ್ನಿ ಅನಿತಾ ಗೆಹ್ಲೋಟ್ ಅವರು ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯಪಾಲರು ರಾಜ್ಯಸಭಾ ಸಂಸದರು ಹಾಗೂ ಧರ್ಮಾಧಿಕಾರಿಗಳಾದ ವಿರೇಂದ್ರ ಹೆಗ್ಗಡೆ ಮತ್ತು ಅವರ ಪತ್ನಿ ಶ್ರೀಮತಿ ಹೇಮಾವತಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದರು.

ಹರ್ಷೇಂದ್ರ ಕುಮಾರ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.