HomeFresh News ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

 ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮುಕ್ಕಚೇರಿ ಸಮೀಪದ ಹಿಲರಿನಗರ ನಿವಾಸಿ ಮುವಾಝ್ (45) ಬಂಧಿತ ಆರೋಪಿ. ಈತ ಕೇರಳದ ಇರಿಕ್ಕೂರುದಲ್ಲಿ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮುವಾಝ್ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆತನ ವಿರುದ್ಧ ಎಲ್‌ಪಿಸಿ ವಾರಂಟ್ ಹೊರಡಿಸಿತ್ತು.

ಈತನನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments