HomeFresh Newsವೈದ್ಯ ಮತ್ತು ರೋಗಿಯ ಸಂಬಂಧ ನಂಬಿಕೆಯ ಮೇಲಿರಬೇಕು : ಡಾ. ಎಂ. ಮೋಹನ ಆಳ್ವ

ವೈದ್ಯ ಮತ್ತು ರೋಗಿಯ ಸಂಬಂಧ ನಂಬಿಕೆಯ ಮೇಲಿರಬೇಕು : ಡಾ. ಎಂ. ಮೋಹನ ಆಳ್ವ

ಮೂಡುಬಿದಿರೆ: ರೋಗಿಯ ಸುರಕ್ಷತೆ, ನೈತಿಕತೆ ಹಾಗೂ ಸೇವಾ ಮನೋಭಾವವೇ ವೈದ್ಯ ವೃತ್ತಿಯಲ್ಲಿ ಅತ್ಯಂತ ಪ್ರಮುಖ ಮೌಲ್ಯಗಳಾಗಿದ್ದು, ವೈದ್ಯ-ರೋಗಿ ಸಂಬಂಧವು ಪರಸ್ಪರ ನಂಬಿಕೆ ಮತ್ತು ಜವಾಬ್ದಾರಿಯ ಆಧಾರದ ಮೇಲೆ ನಿರ್ಮಾಣವಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು.

ಅವರು ಮೂಡುಬಿದಿರೆಯ ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದಲ್ಲಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಮೂಡುಬಿದಿರೆ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವೈದ್ಯರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಐಎಂಎ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಡಾ. ಟಿ.ಎ. ವೀರಭದ್ರಯ್ಯ ಮಾತನಾಡಿ, l ವೈದ್ಯರ ಸಮಸ್ಯೆಗಳಿಗೆ ಸ್ಪಂದಿಸುವುದು, ಸದಸ್ಯರಿಗೆ ಅಗತ್ಯ ಬೆಂಬಲ ನೀಡುವುದು ಹಾಗೂ ವೈದ್ಯರ ಹಿತ ಕಾಪಾಡುವುದು ಸಂಘದ ಪ್ರಮುಖ ಉದ್ದೇಶವಾಗಿದೆ ಎಂದರು.
ಕರ್ನಾಟಕ ವೈದ್ಯಕೀಯ ಮಂಡಳಿ ಅಧ್ಯಕ್ಷ ಡಾ. ಯೋಗಾನಂದ ರೆಡ್ಡಿ ಮಾತನಾಡಿ, ಆಳ್ವಾಸ್ ಶಿಕ್ಷಣ ಸಂಸ್ಥೆಯು ಶಿಕ್ಷಣದ ಜೊತೆಗೆ ಸಂಸ್ಕೃತಿಗೂ ಆದ್ಯತೆ ನೀಡಿ ವಿದ್ಯಾರ್ಥಿಗಳನ್ನು ರೂಪಿಸುತ್ತಿದೆ. ಐಎಂಎ ಮೂಡುಬಿದಿರೆ ಘಟಕಕ್ಕೆ ಸೇರ್ಪಡೆಯಾದ 26 ವೈದ್ಯರ ಮೇಲೆ ಸಾವಿರಾರು ಜನರ ಆರೋಗ್ಯದ ಜವಾಬ್ದಾರಿ ಇದೆ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ, ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಹಾಗೂ ಅಧೀಕ್ಷಕ ಡಾ. ಡಿ.ಎಸ್. ಶಿವಪ್ರಕಾಶ್,ಐಎಂಒ ಕರ್ನಾಟಕ ಘಟಕ ವಿಭಾಗೀಯ ಸಂಯೋಜಕ ಡಾ. ಜಿ.ಕೆ. ಭಟ್ ಮುಖ್ಯ ಅತಿಥಿಯಾಗಿದ್ದರು.
ಐಎಂಎ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷ ಡಾ. ಅಣ್ಣಯ್ಯ ಕುಲಾಲ್ ಪ್ರಾಸ್ತಾವಿಕವಾಗಿ ಮಾತನಾಡಿ, ಮೂಡುಬಿದಿರೆಯಲ್ಲಿ ಐಎಂಎಯ 183ನೇ ಘಟಕ ಸ್ಥಾಪನೆಯಾಗಿರುವುದು ಸಂತಸದ ಸಂಗತಿ. ಆರಂಭದಲ್ಲಿಯೇ 26 ವೈದ್ಯರು ಸದಸ್ಯತ್ವ ಪಡೆದಿದ್ದು, ಮುಂದಿನ ದಿನಗಳಲ್ಲಿ ಘಟಕವು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಲಿದೆ ಎಂದರು.
ಡಾ. ಪ್ರಭಾಚಂದ್ರ ಜೈನ್, ಡಾ. ಕೆ.ಆರ್. ಜೋಯಿಷಿ, ಡಾ. ಜಯಗೋಪಾಲ್ ತೊಳ್ಪಾಡಿ, ಡಾ. ಲೀಲಾ ಎಸ್. ಭಟ್ ಹಾಗೂ ಡಾ. ಪ್ರದೀಪ್ ಕುಮಾರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಮೂಡುಬಿದಿರೆಯ ಚೊಚ್ಚಲ ಐಎಂಎ ಘಟಕದ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಬ್ಯಾಡ್ಜ್ ವಿತರಿಸಿ ಪ್ರತಿಜ್ಞಾವಿಧಿ ಹಾಗೂ ಧ್ವಜವಂದನೆ ನೆರವೇರಿಸಲಾಯಿತು.
ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಡೀನ್ ಡಾ. ಮಹಾಬಲೇಶ್ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಅಧ್ಯಕ್ಷರಾಗಿ ಆಯ್ಕೆಯಾದ ಡಾ. ಶಮಂತ್ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಡಾ. ಆಶೀಶ್ ಶರ್ಮ ವಂದಿಸಿದರು. ಉಪನ್ಯಾಸಕ ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಘಟಕದ ಕೋಶಾಧಿಕಾರಿ ಡಾ. ದಿಲೀಪ್ ಕುಮಾರ್ ಪ್ರತಿಜ್ಞಾವಿಧಿ ಹಾಗೂ ಧ್ವಜವಂದನೆ ನೆರವೇರಿಸಿದರು. ಡಾ. ಮೀನಾ ಕಿರಣ್ ಸನ್ಮಾನಿತರನ್ನು ಪರಿಚಯಿಸಿದರು.
ಡಾ. ಹರೀಶ್ ದೇಲಂತಬೆಟ್ಟು, ಡಾ. ಮೋಹನ್ ಅಪ್ಪಾಜಿ, ಡಾ. ಅವಿನ್ ಆಳ್ವ, ಡಾ. ವೆಂಕಟಾಚಲಪತಿ, ಡಾ. ವಿನಯ ಆಳ್ವ, ವಿವೇಕ್ ಆಳ್ವ, ಡಾ. ಹನ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments