HomeFresh Newsತೊಕ್ಕೊಟ್ಟು: ಮೀನು ಸಾಗಾಟದ ಟೆಂಪೋ ಅಪಘಾತ- ಚಾಲಕನಿಗೆ ಗಾಯ

ತೊಕ್ಕೊಟ್ಟು: ಮೀನು ಸಾಗಾಟದ ಟೆಂಪೋ ಅಪಘಾತ- ಚಾಲಕನಿಗೆ ಗಾಯ

ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಲಾರಿ ಚಾಲಕ ಸಾದಿಕ್ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಮಂಗಳೂರು ಧಕ್ಕೆಯಿಂದ ಉಳ್ಳಾಲ ಫಿಷ್ ಮಿಲ್‌ಗೆ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ, ಚಾಲಕನ ನಿಯಂತ್ರಣ ತಪ್ಪಿ ವಾಲಿದ್ದು, ಈ ವೇಳೆ ಟಯರ್ ಸಿಡಿದು ರಸ್ತೆಗೆ ಉರುಳಿದೆ. ಘಟನೆಯಿಂದ ರಸ್ತೆ ಸಂಚಾರದಲ್ಲಿ ಅಡಚಣೆಯುಂಟಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಪೊಲೀಸರು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments