ತೋಕೂರು: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಮೇರಾ ಭಾರತ್, ಮೈ ಭಾರತ್ ದ. ಕ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ, ಗ್ರಾಮ ಪಂಚಾಯತ್ ಪಡುಪಣಂಬೂರು ಇವರ ಮಾರ್ಗದರ್ಶನದಲ್ಲಿ ರೋಟರಿ ಕ್ಲಬ್ ಬೈಕಂಪಾಡಿ, JCI ಸುರತ್ಕಲ್, ಪ್ರಿಯದರ್ಶಿನಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿ, ಪೂಜಾ ಫ್ರೆಂಡ್ಸ್ ಹಳೆಯಂಗಡಿ, ಶ್ರೀ ಓಂಕಾರೇಶ್ವರಿ ಮಂದಿರ (ರಿ) ತೋಕೂರು, ಒಂಬತ್ತು ಮಾಗಣೆ ಮುಂಡಾಲ ಸಮಾಜ ಸೇವಾ ಟ್ರಸ್ಟ್ (ರಿ) ತೋಕೂರು ಇವರ ಸಹಕಾರದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು ಹಳೆಯಂಗಡಿ ಇವರ ಪ್ರಾಯೋಜಕತ್ವದಲ್ಲಿ ಪರಿಸರ ಸಂರಕ್ಷಣೆಯ ಧ್ಯೇಯದೊಂದಿಗೆ ಉಚಿತ ಸಸಿ ವಿತರಣಾ ಕಾರ್ಯಕ್ರಮವನ್ನು ಶ್ರೀ ಓಂಕಾರೇಶ್ವರಿ ಮಂದಿರದ ವಠಾರದಲ್ಲಿ ನೆರವೇರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರುರಾಜ್ ಎಸ್ ಪೂಜಾರಿಯವರು ವಹಿಸಿದ್ದರು.

ಜೆ ಸಿ ಐ ಸೂರತ್ಕಲ್ ಇದರ ಅಧ್ಯಕ್ಷರಾದ ಜೆಸಿ ಅಶೋಕ್ ಎನ್ ರವರು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಪರಿಸರ ಸಮೃದ್ಧಿಯಾಗಿ ಬೆಳೆದರೆ ಮಾತ್ರ ಮನುಷ್ಯ ಅತ್ಯಂತ ಸುಲಲಿತವಾಗಿ ಉಸಿರಾಡಲು ಸಾಧ್ಯ ಆದ್ದರಿಂದ ಉಸಿರಾಡುವ ಪ್ರತಿಯೊಬ್ಬ ವ್ಯಕ್ತಿಯೂ ಗಿಡಗಳನ್ನು ನೆಟ್ಟು ಪರಿಸರವನ್ನು ಉಳಿಸುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.
ಕಾರ್ಯಕ್ರಮದಲ್ಲಿ ಯೋಗೋಪಾಸನ ಉಚಿತ ಯೋಗ ತರಬೇತಿ ಕೇಂದ್ರ ಕೆಂಚನಕೆರೆ ಮುಲ್ಕಿ ಇಲ್ಲಿನ ಯೋಗ ಗುರುಗಳಾದ ಶ್ರೀ ಯಾದವ ದೇವಾಡಿಗ, ಪ್ರಿಯದರ್ಶಿನಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಸುದರ್ಶನ್, ಓಂಕಾರೇಶ್ವರಿ ಮಂದಿರ (ರಿ) ಮತ್ತು ಒಂಬತ್ತು ಮಾಗಣೆ ಮುಂಡಾಲ ಸಮಾಜ ಸೇವಾ ಟ್ರಸ್ಟ್(ರಿ) ತೋಕೂರು ಇದರ ಅಧ್ಯಕ್ಷರಾದ ಶ್ರೀ ಸದಾಶಿವ ಕುಂದರ್, ರೋಟರಿ ಕ್ಲಬ್ ಬೈಕಂಪಾಡಿ ಇದರ ಪ್ರತಿನಿಧಿ, ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷರಾದ ಶ್ರೀ ಸುರೇಶ್ ಬಿ ದೇವಾಡಿಗ ಫೇಮಸ್ ಯೂತ್ ಕ್ಲಬ್ ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ಪ್ರೇಮಲತಾ ಯೋಗಿಶ್ ರವರು ಉಪಸ್ಥಿತರಿದ್ದರು
ಕಾರ್ಯಕ್ರಮಕ್ಕೆ ಉಚಿತ ಸಸಿಗಳನ್ನು ರೋಟರಿ ಕ್ಲಬ್ ಬೈಕಂಪಾಡಿ ಇದರ ಅಧ್ಯಕ್ಷರಾದ ಶ್ರೀ ಕಶ್ಯಪ್ ಪ್ರಭು ರವರು ವ್ಯವಸ್ಥೆಗೊಳಿಸಿದ್ದರು,
ಕಾರ್ಯಕ್ರಮದಲ್ಲಿ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಹಣ್ಣು ಹಂಪಲುಗಳ ಗಿಡಗಳನ್ನು ವಿತರಣೆ ಮಾಡಲಾಯಿತು ಮತ್ತು ಆಟೋರಿಕ್ಷ ಚಾಲಕರಿಗೆ ಸಸಿಗಳನ್ನು ನೀಡಿ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿಯನ್ನು ಮೂಡಿಸಲಾಯಿತು.
ಕಾರ್ಯಕ್ರಮವನ್ನು ಶ್ರೀ ಭಾಸ್ಕರ್ ಅಮೀನ್ ತೋಕೂರುರವರು ನಿರೂಪಿಸಿದರು.


