ಮುಂದಿನ ಪೀಳಿಗೆಗಾಗಿ ಪ್ರಕೃತಿಯ ಸಮತೋಲನವನ್ನು ಕಾಯ್ದುಕೊಳ್ಳುವ ಪರಿಸರ ಜಾಗೃತಿ ಕಾರ್ಯಕ್ರಮಗಳು ಅತೀ ಅವಶ್ಯಕ – ರೊ. ಹರೀಶ್ ಶೆಟ್ಟಿ

ಭಾರತ ಸರಕಾರ ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ10ನೇ ತೋಕೂರು, ಶ್ರೀ ಜಾರಂದಾಯ ಯುವಕ ಮಂಡಲ ಮತ್ತು ಮಹಿಳಾ ಮಂಡಲ ಹರಿಪಾದೆ, ಡಾ. ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆ ತಪೋವನ ತೋಕೂರು ಇವರ ಜಂಟಿ ಆಶ್ರಯದಲ್ಲಿ ಮೇಬೈಲು ಸದಾಶಿವ ಶೆಟ್ಟಿ ಇವರ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್. ಕೋಡಿ, ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ ಮತ್ತು ಯುವ ವೇದಿಕೆಯ ಪ್ರಾಯೋಜಕತ್ವದಲ್ಲಿಉಚಿತ ಹಣ್ಣು ಹಂಪಲುಗಳ ಸಸಿ ವಿತರಣೆ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದಲ್ಲಿ ನೆರವೇರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸಂಘದ ಅಧ್ಯಕ್ಷರಾದ ಶ್ರೀ ನವೀನ್ ಕೋಟ್ಯಾನ್ ಹರಿಪಾದೆಯವರು ವಹಿಸಿದ್ದರು. ಕಾರ್ಯಕ್ರಮವನ್ನು ರೋಟರಿ ಕ್ಲಬ್ ಬೈಕಂಪಾಡಿ ಇದರ ಅಧ್ಯಕ್ಷರಾದ ರೊ. ಹರೀಶ್ ಶೆಟ್ಟಿ ಉದ್ಘಾಟಿಸಿ, ಮುಂದಿನ ಪೀಳಿಗೆಗಾಗಿ ಪ್ರಕೃತಿಯ ಸಮತೋಲನವನ್ನು ಕಾಯ್ದುಕೊಳ್ಳುವ ಪರಿಸರ ಜಾಗೃತಿ ಕಾರ್ಯಕ್ರಮಗಳು ಅತೀ ಅವಶ್ಯಕ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಮೇಬೈಲು ಸದಾಶಿವ ಶೆಟ್ಟಿ ಯವರ ಪರಿಸರ ಕಾಳಜಿಯನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಹರಿಪಾದೆ ಜಾರಂದಾಯ ಯುವಕ‌ ಮಂಡಲದ ಅಧ್ಯಕ್ಷರಾದ ಸುಬ್ರಹ್ಮಣ್ಯ ಭಟ್. ಫೇಮಸ್ ಯೂತ್ ಕ್ಲಬಿನ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರು ಮಹಿಳಾ ಮಂಡಲದ ಅಧ್ಯಕ್ಷರಾದ ಪ್ರೇಮಲತಾ. ಯೋಗೀಶ್, ಡಾ. ರಾಮಣ್ಣ ಶೆಟ್ಟಿ ‌ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿಯಾದ ಉಷಾ ನರೇಂದ್ರ ಕೆರೆಕಾಡು. ಬ್ರಹ್ಮಶ್ರೀ ನಾರಾಯಣಗುರು ಮಹಿಳಾ ವೇದಿಕೆಯ ಉಪಾಧ್ಯಕ್ಷರಾದ ಅಮಿತಾ ದಿನಕರ್ ಸಾಲ್ಯಾನ್. ಯುವ ವೇದಿಕೆಯ ಅಧ್ಯಕ್ಷರಾದ ಪವನ್ ರವರು ಉಪಸ್ಥಿತರಿದ್ದರು.

ಶ್ರೀ ಸುಬ್ರಮಣ್ಯ ದೇವಸ್ಥಾನ ತೋಕೂರು ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಗುರುರಾಜ ಎಸ್ ಪೂಜಾರಿಯವರು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.

ಕಾರ್ಯಕ್ರಮದಲ್ಲಿ 200ಕ್ಕೂ ಹೆಚ್ಚು ಹಣ್ಣು ಹಂಪಲುಗಳ ಸಸಿಗಳನ್ನು ಹಂಚಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ವೇದಿಕೆಯ ಕಾರ್ಯದರ್ಶಿ ಬಬಿತಾ ಡಿ ಸುವರ್ಣ ರವರು ಪ್ರಾರ್ಥನೆಗೈದು, ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷರಾದ ಭಾಸ್ಕರ್ ಅಮೀನ್ ರವರು ಪ್ರಸ್ತಾವಿಕ ಮತ್ತು ಸ್ವಾಗತವನ್ನು ನೆರವೇರಿಸಿ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಕಾರ್ಯದರ್ಶಿ ಅಭಿಜಿತ್ ಸುವರ್ಣರವರು ಧನ್ಯವಾದವನ್ನು ಅರ್ಪಿಸಿದರು.
ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆಯ ಕೋಶಾಧಿಕಾರಿ ಸುನೀತಾ ಗುರುರಾಜ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Related Posts

Leave a Reply

Your email address will not be published.