ಹಿರಿಯ ಪತ್ರಿಕೋದ್ಯಮಿ ಟಿ. ಮೋಹನ್ ದಾಸ್ ಪೈ ನಿಧನ

ಮಣಿಪಾಲದ ಪೈ ಕುಟುಂಬದ ಹಿರಿಯರಾದ ತೋನ್ಸೆ ಮೋಹನದಾಸ್ ಪೈ (89) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಆಸ್ಪತ್ರೆಯಲ್ಲಿ ಇತ್ತೀಚಿಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಡಾ. ಟಿಎಂಎ ಪೈ ಪ್ರತಿಷ್ಠಾನ, ಶಿಕ್ಷಣ ಸಂಸ್ಥೆ ಎಂಜಿಎಂ ಕಾಲೇಜಿನ ಟ್ರಸ್ಟಿ, ಸಿಂಡಿಕೇಟ್ ಬ್ಯಾಂಕಿನ ಪೂರ್ವ ರೂಪ ಐಸಿಡಿಎಸ್ ಲಿ., ಮಣಿಪಾಲ್ ಮೀಡಿಯ ನೆಟ್‍ವರ್ಕ್ ಲಿ. ಮೊದಲಾದ ಸಂಸ್ಥೆಗಳ ಅಧ್ಯಕ್ಷರಾಗಿ ಹಲವು ಸಂಸ್ಥೆಗಳ ಬೆಳವಣಿಗೆಗೆ ಕಾರಣರಾಗಿದ್ದರು.

1933ರ ಜೂ. 20ರಂದು ಜನಿಸಿದ ಮೋಹನದಾಸ್ ಪೈಯವರು ಡಾ. ಟಿಎಂಎ ಪೈಯವರ ಹಿರಿಯ ಪುತ್ರ. ಇವರಿಗೆ ಮೂರು ವರ್ಷ ಆಗಿರುವಾಗ ತಂದೆಯವರು ಉಡುಪಿಯಿಂದ ಮಣಿಪಾಲಕ್ಕೆ ಸ್ಥಳಾಂತರವಾದ ಕಾರಣ ಇವರೂ ಮಣಿಪಾಲದಲ್ಲಿ ಬೆಳೆದರು. ಶಿಕ್ಷಣದ ಬಳಿಕ ತಂದೆಯವರು ಆರಂಭಿಸಿದ ಸಂಸ್ಥೆಗಳಲ್ಲಿ ತೊಡಗಿದರು. ಅವರು ಮೊದಲಾಗಿ ಪ್ರವೇಶಿಸಿದ್ದು ಮಣಿಪಾಲದಲ್ಲಿ ಹೆಂಚಿನ ಕಾರ್ಖಾನೆ ನಡೆಸುತ್ತಿದ್ದ ಕೆನರಾ ಲ್ಯಾಂಡ್ ಇನ್ ವೆಸ್ಟ್ ಮೆಂಟ್ಸ್ ನ ಜನರಲ್ ಮೆನೇಜರ್ ಆಗಿ. ಇದರ ಜತೆ ಮಣಿಪಾಲ್ ಪವರ್ ಪ್ರೆಸ್ ಆಡಳಿತ ಪಾಲುದಾರರಾಗಿ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಿಕೊಂಡರು.

ಇಂದು ನಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

Related Posts

Leave a Reply

Your email address will not be published.