HomeFresh Newsಜಿಲ್ಲಾಡಳಿತಕ್ಕೆ ಮೂರು ದಿನಗಳ ಗಡುವು : ಕೊಲ್ಲೂರಿನ ಸಂತ್ರಸ್ತ ಕೊರಗ ಸಮುದಾಯದ ಮಹಿಳೆಗೆ ಪರಿಹಾರ...

ಜಿಲ್ಲಾಡಳಿತಕ್ಕೆ ಮೂರು ದಿನಗಳ ಗಡುವು : ಕೊಲ್ಲೂರಿನ ಸಂತ್ರಸ್ತ ಕೊರಗ ಸಮುದಾಯದ ಮಹಿಳೆಗೆ ಪರಿಹಾರ ಹಾಗೂ ನ್ಯಾಯ ಒದಗಿಸಬೇಕು.ಇಲ್ಲವಾದಲ್ಲಿ ಅನಿರ್ದಿಷ್ಟಾವಧಿ ಧರಣಿ: ಬೈಂದೂರು ಶಾಸಕ ಗಂಟಿಹೊಳೆ

ಕೊಲ್ಲೂರಿನಲ್ಲಿ ಕಾನೂನು ಕೋರ್ಟು ಆದೇಶ ನೆಪದಲ್ಲಿ ಒಂಚೂರು ಮಾನವೀಯತೆ ಇಲ್ಲದೇ ಕಳೆದ ಹಲವಾರು ವರ್ಷಗಳಿಂದ ವಾಸ ಮಾಡುತ್ತಿದ್ದ ಸಮಾಜದಲ್ಲಿ ಅತೀ ನಿರ್ಲಕ್ಷಿತ ಹಾಗೂ ಸೂಕ್ಷ್ಮ ಸಮುದಾಯವಾದ ಕೊರಗ ಕುಟುಂಬದ ವಾಸ್ತವ್ಯದ ಮನೆಯನ್ನು ನಾಶ ಪಡಿಸಿರುವುದು ತೀರಾ ದುಃಖಕರ ಹಾಗೂ ದುರದೃಷ್ಟಕರ ಸಂಗತಿಯಾಗಿದೆ.ಈ ಪ್ರಕ್ರಿಯೆಯಲ್ಲಿ ಪೊಲೀಸ್ ಇಲಾಖೆಯೂ ಸೇರಿದಂತೆ ಈ ಪ್ರಕರಣವು ಈ ಹಂತದವರೆಗೆ ಬರುವಲ್ಲಿ ಜಿಲ್ಲಾಡಳಿತ ನಡೆದು ಕೊಂಡ ರೀತಿ ತೀರಾ ಖಂಡನೀಯ. ಹಲವು ವರ್ಷಗಳಿಂದ ಆ ಕುಟುಂಬವು ವಿವಾದಿತ ಎಂದು ಬಿಂಬಿತವಾಗಿರುವ ಜಾಗದಲ್ಲಿ ವಾಸ್ತವ್ಯವಿದ್ದರೂ ಸದ್ರಿ ಕುಟುಂಬಕ್ಕೆ ನ್ಯಾಯ ಒದಗಿಸಲು ಸಂಬಂಧಪಟ್ಟ ಇಲಾಖೆಗಳು ಸಂಪೂರ್ಣ ವಿಫಲವಾಗಿದ್ದು, ಮಾನವೀಯತೆ ಇಲ್ಲದ ಇಡೀ ಮಾನವ ಸಮಾಜ ತಲೆ ತಗ್ಗಿಸುವ ಈ ಕೃತ್ಯಕ್ಕೆ ಜಿಲ್ಲಾಡಳಿತವೇ ಸಂಪೂರ್ಣ ಹೊಣೆ ಎಂದು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿ ಹೊಳೆ ಘಟನೆಯ ಬಗ್ಗೆ ವಿಷಾದ ವ್ಯಕ್ತ ಪಡಿಸಿದ್ದಾರೆ ಹಾಗೂ ಜಿಲ್ಲಾಡಳಿತ ದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಕೊರಗ ಸಮುದಾಯವು ಹಲವು ದಶಕಗಳಿಂದ ಅತ್ಯಂತ ನಿರ್ಲಕ್ಷಿತ ಹಾಗೂ ದಿನದಿಂದ ದಿನಕ್ಕೆ ನಶಿಸುತ್ತಿರುವ ಜನಾಂಗವಾಗಿದ್ದು ಪ್ರತಿ ಕುಟುಂಬದ ಪ್ರತಿಯೊಂದು ಹಂತದ ಕಾಳಜಿ ವಹಿಸಿ ಅವರಿಗೆ ಸಿಗಬೇಕಾದ ಎಲ್ಲಾ ಸೌಲಭ್ಯ ಒದಗಿಸುವ ಜವಾಬ್ದಾರಿ ಇಲಾಖೆಗೆ ಇದ್ದು ಎಲ್ಲರ ಕಣ್ಣೆದುರಿಗೆ ಇಂತಹ ಘಟನೆ ನಡೆಯುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯ ವಿಲ್ಲ. ಹಾಗಾಗಿ ನೊಂದ ಕುಟುಂಬಕ್ಕೆ ಕೂಡಲೇ ಮೂರು ದಿನಗಳ ಒಳಗೆ ಪರಿಹಾರ ನೀಡಬೇಕು ಹಾಗೂ ಸೂಕ್ತ ವಾದ ಜಾಗ ಮಂಜೂರು ಮಾಡಿ ಗೌರವ ಯುತವಾದ ಜೀವನ ಕಟ್ಟಿ ಕೊಳ್ಳಲು ಬೇಕಾದ ಎಲ್ಲಾ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳಬೇಕು.ಇಲ್ಲವಾದರೆ ಬೇಡಿಕೆ ಈಡೇರುವವರೆಗೆ ನೊಂದ ಕೊರಗ ಕುಟುಂಬದ ಬಂಧುಗಳೊಂದಿಗೆ ಕೂಡಿಕೊಂಡು ಧರಣಿ ಕೂರಲಾಗುವುದು ಎಂದು ಇದೇ ಸಂದರ್ಭದಲ್ಲಿ ಶಾಸಕರು ತಮ್ಮ ಹೇಳಿಕೆಯನ್ನು ನೀಡಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments