ಉಕ್ಕುಡ ಸಮೀಪದ ಕಪ್ಪು ಕಲ್ಲಿನ ಕ್ವಾರಿಗೆ ಮೂರು ಕಾಡುಕೋಣಗಳು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ. ಮೃತ ಕಾಡುಕೋಣಗಳ ದೇಹಗಳನ್ನು ರಕ್ಷಿತಾರಣ್ಯ ಪ್ರದೇಶಕ್ಕೆ ಕೊಂಡೊಯ್ದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗಿದೆ.


