HomeFresh Newsಅರಕಲಗೂಡು ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ ಉಸ್ತುವಾರಿಯಾಗಿ ಟಿ.ಎಂ ಶಹೀದ್ ತೆಕ್ಕಿಲ್ ನೇಮಕ , ಸುಳ್ಯಕ್ಕೆ...

ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ ಉಸ್ತುವಾರಿಯಾಗಿ ಟಿ.ಎಂ ಶಹೀದ್ ತೆಕ್ಕಿಲ್ ನೇಮಕ , ಸುಳ್ಯಕ್ಕೆ ಚಂದ್ರಕಲಾ ಪ್ರಸನ್ನ

ಹಾಸನ ಜಿಲ್ಲೆ ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಕೆ.ಪಿ.,ಸಿ.ಸಿ ಉಸ್ತುವಾರಿಯಾಗಿ ಕಾಂಗ್ರೆಸ್ ಮುಖಂಡ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್‌ರವರನ್ನು ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕಗೊಳಿಸಿರುತ್ತಾರೆ. ಕ್ಷೆತ್ರದ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡು ವಿಧಾನ ಸಭೆ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಸಂಬಂಧಿಸಿದಂತೆ ಪಕ್ಷ ಬಲವರ್ಧನೆಗೆ ಕಾರ್ಯಚಟುವಟಿಕೆಗಳನ್ನು ಡಿ.ಸಿ.ಸಿ/ಬಿ.ಸಿ.ಸಿ ಹಾಗೂ ಸ್ಥಳೀಯ ಮುಖಂಡರುಗಳ ಸಹಕಾರದೊಂದಿಗೆ ನಿರ್ವಹಿಸಲು ಕೋರಿರುತ್ತಾರೆ.
ಇವರು ತಾಲೂಕು ಎನ್.ಎಸ್.ಯು.ಐ. ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಎನ್.ಎಸ್.ಯು.ಐ. ಜಿಲ್ಲಾ ಪ್ರ‍್ರಧಾನ ಕಾರ್ಯದರ್ಶಿಯಾಗಿ, ಎನ್.ಎಸ್.ಯು.ಐ.ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಎನ್.ಎಸ್.ಯು.ಐ. ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ, ಕೆ.ಪಿ.ಸಿ.ಸಿ ಯ ಮುಖ್ಯ ವಕ್ತಾರರಾಗಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ಸೇವೆ ಸಲ್ಲಿಸಿರುತ್ತಾರೆ. ಕೆ.ಪಿ.ಸಿ.ಸಿ ಯ ಕಾರ್ಯದರ್ಶಿಯಾಗಿ, ಹಾವೇರಿ ಜಿಲ್ಲೆಯ ಹಿರೆಕೆರೂರು ವಿಧಾನ ಸಭಾ ಕ್ಷೇತ್ರ, ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನ ಸಭಾಕ್ಷೇತ್ರ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಹಾಗೂ ಲೋಕಸಭಾ ಚುನಾವಣೆ ಸಂಧರ್ಭದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನ ಸಭಾ ಕ್ಷೇತ್ರದ ಉಸ್ತುವಾರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುತ್ತಾರೆ. 2002 ರಲ್ಲಿ ದೆಹಲಿಯಲ್ಲಿ ನಡೆದ ಎ.ಐ.ಸಿಸಿ ಸಮ್ಮೇಳನದಲ್ಲಿ ಹಾಗೂ ೬೦ ನೇ ಪೂರ್ಣ ಅಧಿವೇಶನದಲ್ಲಿ ರಾಜ್ಯದ ಪ್ರತಿನಿಧಿಯಾಗಿ ಭಾಗವಹಿಸಿದರು. ಪ್ರಸ್ತುತ ಪಕ್ಷದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ನ ಸದಸ್ಯರಾಗಿ, ಕಾರ್ಮಿಕ ಮಂಡಳಿಯ ಸದಸ್ಯರಾಗಿ, ಕರ್ನಾಟಕ ರಾಜ್ಯ ಅರಣ್ಯ ನಿಗಮದ ನಿರ್ದೇಶಕರಾಗಿ, ಎರಡು ಬಾರಿ ಕೇಂದ್ರ ನಾರು ಮಂಡಳಿ ಸದಸ್ಯರಾಗಿ ಪ್ರಸ್ತುತ ಕರ್ನಾಟಕ ರಾಜ್ಯ ರಾಜೀವ್ ಯೂತ್ ಪೌಂಡೇಶನ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅರಂತೋಡು ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾಗಿ, ಕಳೆದ ಮೂರು ದಶಕಗಳಿಂದ ಸಾಮಾಜಿಕ, ರಾಜಕೀಯ ಶೈಕ್ಷಣಿಕ, ಧಾರ್ಮಿಕ, ಸಹಕಾರಿ, ಮತ್ತು ಕ್ರೀಡಾ ಕ್ಷೇತ್ರದಲ್ಲಿ ಕ್ರೀಯಾಶೀಲರಾಗಿರುವ ಇವರು ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ ಮತ್ತು ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಸುಳ್ಯ ತಾಲೂಕು ಅಲ್ಪ ಸಂಖ್ಯಾತರ ವಿವಿದ್ಧೋದೇಶ ಸಹಕಾರಿ ಸಂಘದಲ್ಲಿ 7 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.
ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೆ ಚಂದ್ರಕಲಾ ಪ್ರಸನ್ನ, ಸುಳ್ಯ ವಿಧಾನ ಸಭಾ ಕ್ಷೆತ್ರದ ಕೆ.ಪಿ.ಸಿ.ಸಿ ಉಸ್ತುವಾರಿಯಾಗಿ ಕೊಡಗು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಕರ್ನಾಟಕ ಕೊಳಚೆ ನಿರ್ಮೂಲನ ಮತ್ತು ಒಳಚರಂಡಿ ಮಂಡಳಿಯ ಮಾಜಿ ಅಧ್ಯಕ್ಷೆ ಚಂದ್ರಕಲಾ ಪ್ರಸನ್ನರವರನ್ನು ನೇಮಕಗೊಂಡಿರುತ್ತಾರೆ.

add - Haeir
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments