ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ
ಸಂಪೂರ್ಣವಾಗಿ ಜೀರ್ಣೋದ್ಧಾರಗೊಂಡಿರುವ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಬ್ರಹ್ಮಕುಂಭಾಭಿಷೇಕ ಜರುಗಿತು.
ದೇವಳದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ ೫-೪೫ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕುಂಭಾಭಿಷೇಕ ನಡೆಯಲಿದೆ. ಕಲಾಶಾಭಿಷೇಕ, ಪ್ರಸನ್ನಪೂಜೆ, ನ್ಯಾಸಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆದು, ಹಗಲು ರಥೋತ್ಸವ, ಪಲ್ಲಪೂಜೆ, ಪ್ರಸನ್ನಪೂಜೆ, ಮಹಾಅನ್ನಂತರ್ಪಣೆ, ಉತ್ಸವಬಲಿ, ಶ್ರೀ ಭೂತಬಲಿ, ಶಯನೋತ್ಸವ, ಕವಾಟ ಬಂಧನ ನಡೆಯಲಿದೆ. ಸಂಜೆ ಧಾರ್ಮಿಕ ಸಭೆ ಜರಗಲಿದೆ. ವಿವಿಧ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಗೊಳ್ಳಲಿದೆ. ಅಂದಾಜು ೫೦ ಸಾವಿರ ಮಂದಿ ಭಾಗವಹಿಸುವುದರಿಂದ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರಿದಾಸ್ ಭಟ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಂತೋಷ್‌ಕುಮಾರ್ ಹೆಗ್ಡೆ ಜಂಟಿ ತಿಳಿಸಿದ್ದಾರೆ.