ಮಡಿಕೇರಿ-ಸಂಪಾಜೆ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ

ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ, ಸಾರ್ವಜನಿಕರ ಹಿತಾಸಕ್ತಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 275 ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ 90.10ರ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದೆ.ಎಂದು ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಿಲ್ಲಾಡಳಿತಕ್ಕೆ ನೀಡಿರುವ ವರದಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ತುರ್ತು ಸೇವೆಗಳ ಮತ್ತು ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂಚರಿಸುವ ವಾಹನಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.ಕೊಡಗು ಜಿಲ್ಲೆಯ ಮೂಲಕ ಮೈಸೂರು, ಬೆಂಗಳೂರು ಮೊದಲಾದ ಸ್ಥಳಗಳಿಗೆ ಸಂಚರಿಸುವ ವಾಹನಗಳು ಬದಲಿ ರಸ್ತೆಯಾದ ಚಾರ್ಮಾಡಿ ಘಾಟ್ , ಕೊಟ್ಟಿಗೆಹಾರ ಮಾರ್ಗವನ್ನು ಬಳಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

add - ocean andhra food

Related Posts

Leave a Reply

Your email address will not be published.