HomeFresh Newsರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ‌ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ ಅನುರಾಧಾ ಕುರುಂಜಿ

ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ‌ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ ಅನುರಾಧಾ ಕುರುಂಜಿ

ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರು, ಹಾಗೂ ಎನ್ನೆಂಸಿಯ ಉಪನ್ಯಾಸಕರೂ ಆದ ಡಾ. ಅನುರಾಧಾ ಕುರುಂಜಿ ಯವರು ಕರ್ನಾಟಕ‌ ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುತ್ತಾರೆ.

ಕರ್ನಾಟಕ ರಾಜ್ಯ ಎನ್ ಎಸ್ ಎಸ್ ಕೋಶ ಮತ್ತು .ಮಂಗಳೂರಿನ ಯೇನೆಪೋಯ ಡೀಮ್ಡ್ ವಿಶ್ವ‌ವಿದ್ಯಾಲಯದ ಸಹಯೋಗದಲ್ಲಿ ಫೆ 3 ರಿಂದ 7 ರವರೆಗೆ ಏನೇಪೋಯ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ನಡೆದ ಶಿಬಿರದಲ್ಲಿ ರಾಜ್ಯದ ವಿವಿಧ ಪದವಿ, ಮೆಡಿಕಲ್ , ಪಾಲಿಟೆಕ್ನಿಕ್, ಇಂಜಿನಿಯರಿಂಗ್, ಪದವಿ ಪೂರ್ವ ಮೊದಲಾದ ಕಾಲೇಜುಗಳ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಿಗೆ ಹಮ್ಮಿಕೊಂಡ ತರಬೇತಿ ಶಿಬಿರದಲ್ಲಿ ಇವರು “ಎನ್ನೆಸ್ಸೆಸ್ ಕಾರ್ಯಕ್ರಮಗಳು- ಪರಿಣಾಮಕಾರಿ ಸೇವೆಯತ್ತ ಒಂದು ಹೆಜ್ಜೆ.” ವಿಷಯದ ಕುರಿತು ತರಬೇತಿ ನೀಡಿದರು.. ತರಬೇತಿ‌ ನೀಡುವುದನ್ನು ಹವ್ಯಾಸವಾಗಿ ಮಾಡಿಕೊಂಡಿರುವ ಇವರು‌ ಚಂದನ‌ ಟಿ ವಿಯಲ್ಲಿ ನೀಡಿದ ತರಬೇತಿ ಸೇರಿದಂತೆ 2500 ಕ್ಕೂ ಮಿಕ್ಕಿ ತರಬೇತಿ‌ ನೀಡಿರುವ ಹೆಗ್ಗಳಿಕೆ ಇವರದ್ದು‌‌ .

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments