ಶಿಕ್ಷಣ ತಜ್ಞರು, ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ನಿಟ್ಟೆ. ವಿನಯ್ ಹೆಗ್ಡೆ ಅವರಿಗೆ ಶಿರ್ವದಲ್ಲಿ ಶ್ರದ್ಧಾಂಜಲಿ ಸಭೆ
ಕಾಪು:ಸಮಾಜ ಸೇವಕರು, ಶಿಕ್ಷಣ ತಜ್ಞರು, ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಶ್ರೀ ನಿಟ್ಟೆ ವಿನಯ್ ಹೆಗ್ಡೆ ಅವರಿಗೆ ವಿಧ್ಯಾವರ್ಧಕ ಸಂಘ (ರಿ.) ಶಿರ್ವದಲ್ಲಿ ಇಂದು ನಡೆದ ಶೃಧ್ಧಾಂಜಲಿ ಸಭೆಯಲ್ಲಿ ಶಾಸಕರು, ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ನುಡಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಧ್ಯಾವರ್ಧಕ ಸಂಘ ಸಂಚಾಲಕರಾದ ಮಟ್ಟಾರು ರತ್ನಾಕರ್ ಹೆಗ್ಡೆ, ಸದಸ್ಯರುಗಳಾದ ನಿತ್ಯಾನಂದ ಹೆಗ್ಡೆ, ಜಗದೀಶ್ ಅರಸ್, ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ಆಡಳಿತಾಧಿಕಾರಿ ವೈ ಭಾಸ್ಕರ್ ಶೆಟ್ಟಿ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು, ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

















