HomeFresh Newsತುಳುಭಾಷೆಗೆ ಅಧಿಕೃತ ಸ್ಥಾನಮಾನ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

ತುಳುಭಾಷೆಗೆ ಅಧಿಕೃತ ಸ್ಥಾನಮಾನ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ರಾಜ್ಯದ ೨ನೇ ಅಧಿಕೃತ ಭಾಷಾ ಸ್ಥಾನಮಾನ ನೀಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಸತತ ಮೂರು ಗಂಟೆಗಳ ಕಾಲ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಸಂಪುಟದಲ್ಲಿ ತುಳುವಿಗೆ ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನ ನೀಡುವ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

”ಹಿಂದಿನ ಸರಕಾರಗಳು ಯಾಕೆ ಮಾಡಲಿಲ್ಲ ಅಂತ ನಾನು ಪ್ರಶ್ನೆ ಮಾಡುವುದಿಲ್ಲ. ನಮಗೆ ಬದ್ಧತೆ ಇದೆ. ನಾವು ಭಾವನೆಗಳ ಮೇಲೆ ರಾಜಕಾರಣ ಮಾಡುವುದಿಲ್ಲ. ನಾವು ಬದುಕಿನ ಮೇಲೆ ಮಾಡುತ್ತೇವೆ” ಎಂದು ಸಿಎಂ ತಿಳಿಸಿದರು.

”ಯು.ಟಿ.ಖಾದರ್ ಅವರು ಸ್ಪೀಕರ್ ಆಗಿದ್ದರು. ಅವರು ಮೊದಲ ಪ್ರಶ್ನೆ ಎತ್ತಿದ್ದೆ ತುಳು ಭಾಷೆಯ ಬಗ್ಗೆ. ಅವರೊಬ್ಬರಿಗೆ ಅಲ್ಲ, ಈ ಬಗ್ಗೆ ಬೇಡಿಕೆ ಇಟ್ಟಿದ್ದ ಎಲ್ಲರಿಗೂ ನಾನು ಅಭಿನಂದಿಸುತ್ತೇನೆ” ಎಂದು ಸಿಎಂ ಹೇಳಿದರು.

ಕರಾವಳಿಯ ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ನಡೆದಿದ್ದು, ದಕ್ಷಿಣ ಕನ್ನಡ ಮತ್ತು, ಉಡುಪಿಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ತುಳು ಮಾತೃಭಾಷಿಗರಾಗಿದ್ದಾರೆ. ಈ ಮೂಲಕ ಸರಕಾರ ಭಾವನಾತ್ಮಕ ವಿಚಾರಕ್ಕೂ ಮನ್ನಣೆ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments