HomeFresh Newsತುಳು ಭಾಷಾ ಕಲಿಕಾ ಪುಸ್ತಕ ಬಿಡುಗಡೆ

ತುಳು ಭಾಷಾ ಕಲಿಕಾ ಪುಸ್ತಕ ಬಿಡುಗಡೆ

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು ಪುಸ್ತಕಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್ ತಂಗಡಗಿ ಅವರು ಬಿಡುಗಡೆ ಮಾಡಿದರು.

ಇಂಗ್ಲೀಷ್ ಭಾಷಿಗರಿಗಾಗಿ ಕೆ.ಟಿ.ಗಟ್ಟಿ ಅವರ ‘ಲರ್ನ್ ತುಳು ನ್ಯಾಚುರಲಿ’ ಕೃತಿ ಹಾಗೂ ಕನ್ನಡ ಭಾಷಿಗರಿಗಾಗಿ ಡಾ.ಯು.ಪಿ.ಉಪಾಧ್ಯಾಯರ ‘ತುಳು ಕೈಪಿಡಿ’ ಕೃತಿಗಳ ಪರಿಷ್ಕೃತ ಮುದ್ರಣವನ್ನು ತುಳು ಅಕಾಡೆಮಿ ಹೊರತಂದಿದೆ. ತುಳು ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆಯಾದ ಹಿನ್ನೆಲೆಯಲ್ಲಿ ತುಳು ಕಲಿಕೆಯ ಪುಸ್ತಕಗಳ ಬಗ್ಗೆ
ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಈ ಕೃತಿಗಳನ್ನು ಪ್ರಕಟಿಸಿರುವ ಬಗ್ಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ಸಚಿವರಿಗೆ ಮಾಹಿತಿ ನೀಡಿದರು.

ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ಆಯುಕ್ತರ ಕಚೇರಿಯಲ್ಲಿ ನಡೆದ ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾಜಿ ಸಚಿವೆ ಡಾ. ಜಯಮಾಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ಮಂಜುಶ್ರೀ ಎನ್, ಇಲಾಖೆಯ ನಿರ್ದೇಶಕಿ ಡಾ.ಕೆ.ಎಂ ವಸುಂಧರ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಆಲ್ವಾರಿಸ್ ,ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ
ಮಾವಾಜಿ ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments