ಹಲವೆಡೆ ಸಂವಿಧಾನ ಪೀಠಿಕೆಯ ತುಳು ಓದು ಅಭಿಯಾನ
ಮಂಗಳೂರು : ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಪೀಠಿಕೆಯನ್ನು ತುಳುವಿನಲ್ಲಿ ಓದುವ ಕಾರ್ಯಕ್ರಮ ಮಂಗಳೂರಿನಲ್ಲಿ ಈ ದಿನ ಹಲವೆಡೆ ನಡೆಯಿತು. ಸಂವಿಧಾನ ಪೀಠಿಕೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭಾಷೆಗೆ ಅನುವಾದಿಸಿ ಫಲಕದ ರೂಪದಲ್ಲಿ ಬಿಡುಗಡೆ ಮಾಡಿತ್ತು. ಮಂಗಳೂರಿನ ತುಳು ಭವನ, ಮಂಗಳೂರು ರಥಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರು ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ತುಳು ಪರಿಷತ್ ಮಂಗಳೂರು ಘಟಕ , ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜು, ಮುಲ್ಕಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ ಹಲವೆಡೆ ತುಳು ಭಾಷೆಯಲ್ಲಿ ಸಂವಿಧಾನ ಪೀಠಿಕೆಯನ್ನು ಓದುವ ಅಭಿಯಾನ ನಡೆಯಿತು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಸಂವಿಧಾನ ಪೀಠಿಕೆಯನ್ನು ತುಳುವಿನಲ್ಲಿ ಓದಲಾಯಿತು

ತುಳು ಪರಿಷತ್ ಸಂಸ್ಥೆಯ ವತಿಯಿಂದ ತುಳುವಿನಲ್ಲಿ ಸಂವಿಧಾನ ಪೀಠಿಕೆಯ ಓದು



















