ಉಡುಪಿ : ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ವತಿಯಿಂದ ಆಟಿಡೊಂಜಿ ದಿನ

ತುಳುನಾಡ ರಕ್ಷಣಾ ವೇದಿಕೆಯು ಕಳೆದ 13 ವರ್ಷಗಳಲ್ಲಿ ಹಲವಾರು ಜನಪರ ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ವತಿಯಿಂದ ಉಡುಪಿ ಜಿಲ್ಲಾಧ್ಯಕ್ಷರಾದ ರೋಹಿತ್ ಕರಂಬಳ್ಳಿಯವರ ನೇತೃತ್ವದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇದರ ವಿಜ್ಞಾಪನಾ ಪತ್ರವನ್ನು ಜೈನ ದಿಗಂಬರ ಮಠ ಮೂಡುಬಿದಿರೆ ಜಗದ್ಗುರು ಪರಮ ಪೂಜ್ಯ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ವರ್ಯ ಮಹಾ ಸ್ವಾಮೀಜಿಯವರ ದಿವ್ಯ ಹಸ್ತದಿಂದ ಬಿಡುಗಡೆಗೊಳಿಸಿದರು.

ಈ ಕಾರ್ಯಕ್ರಮದಲ್ಲಿ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪು, ಕೇಂದ್ರೀಯ ಕಛೇರಿ ಕಾರ್ಯದರ್ಶಿ ಪ್ರಶಾಂತ್‌ ಭಟ್‌ ಕಡಬ, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜರುದ್ದೀನ್‌ ಸುಬ್ರಹ್ಮಣ್ಯ ನಗರ , ಉಡುಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೊಹಮ್ಮದ್‌ ಹಾರಿಸ್‌, ಸದಾನಂದ್‌ ಜಿ.ಪುತ್ರನ್‌, ಗಣೇಶ್‌ ರಾವ್ ಉಪಸ್ಥಿತರಿದ್ದರು. ಆಟಿಡೊಂಜಿ ದಿನ ಕಾರ್ಯಕ್ರಮವು ಆಗಸ್ಟ್‌ 14 ರಂದು ಉಡುಪಿಯ ಬ್ರಹ್ಮಗಿರಿ ಲಯನ್ಸ್‌ ಭವನದಲ್ಲಿ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಶಾಲಾ ಹಾಗೂ ಕಾಲೇಜ್ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ (ನೃತ್ಯ, ಸಂಗೀತ ಕಾಂಪಿಟೇಷನ್) ನಡೆಯಲಿದ್ದು ಮದ್ಯಾಹ್ನ 12 ಗಂಟೆಗೆ ಸಬಾಕಾರ್ಯಕ್ರಮ ನಡೆಯಲಿದೆ. ಬಳಿಕ 1 ಗಂಟೆಗೆ ಆಟಿದ ಉನಸ್‌ ಏರ್ಪಡಿಸಲಾಗಿದ್ದು, ಮದ್ಯಾಹ್ನ 2 ಗಂಟೆಗೆ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.

Related Posts

Leave a Reply

Your email address will not be published.