ಬಂಟ್ವಾಳ : ತುಂಬೆ ಗ್ರಾ.ಪಂ.ನ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರ ಸ್ವೀಕಾರ

ಬಂಟ್ವಾಳ: ತುಂಬೆ ಗ್ರಾ.ಪಂ.ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಜಯಂತಿ ಕೇಶವ ಹಾಗೂ ಉಪಾಧ್ಯಕ್ಷರಾಗಿ ಗಣೇಶ್ ಸಾಲ್ಯಾನ್ ತುಂಬೆ ಬುಧವಾರ ಅಧಿಕಾರ ಸ್ವೀಕರಿಸಿದರು. ಬಳಿಕ ಪಂಚಾಯತಿ ಕಚೇರಿ ಆವರಣದಲ್ಲಿ ಗಿಡ ನೆಡುವ ಮೂಲಕ ಪದಗ್ರಹಣ ಕಾರ್ಯಕ್ರಮವನ್ನು ಸ್ಮರಣೀಯವಾಗಿಸಿ ಕೊಂಡರು.


ಈ ಸಂದರ್ಭ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ರೆವರೆಂಡ್ ಫಾಧರ್ ಸಿಲ್ವೆಸ್ಟರ್ ವಿನ್ಸೆಂಟ್ ಲೋಬೋ, ಬಿ.ಎ. ಗ್ರೂಫ್‍ನ ಸಲಾಂ ತುಂಬೆ, ನಿಕಟಪೂರ್ವಾಧ್ಯಕ್ಷ ಪ್ರವೀಣ್ ಬಿ. ತುಂಬೆ, ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್. ಗಂಗಾಧರ ಆಳ್ವ, ಪಿಡಿಓ ಚಂದ್ರಾವತಿ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಪ್ರಮುಖರಾದ ಸದಾಶಿವ ಡಿ. ತುಂಬೆ, ಸದಸ್ಯ ಮಹಮ್ಮದ್ ವಳವೂರು, ಬಂಟ್ವಾಳ ತಾ.ಪಂ. ಮಾಜಿ ಅಧ್ಯಕ್ಷ ಚಂದ್ರಹಾಸ ಕಕೇರಾ, ಮೋನಪ್ಪ ಮಜಿ, ಪ್ರಕಾಶ್ಚಂದ್ರ ರೈ ದೇವಸ್ಯ, ಧರ್ಮಾವತಿ ಗಟ್ಟಿ, ಲೋಲಾಕ್ಷ ಶೆಟ್ಟಿ ಮೊದಲಾದ ಗಣ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು.

Related Posts

Leave a Reply

Your email address will not be published.