HomeFresh Newsವಿಟ್ಲ: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಇಬ್ಬರಿಗೆ ಗಾಯ

ವಿಟ್ಲ: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಇಬ್ಬರಿಗೆ ಗಾಯ

ವಿಟ್ಲ: ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಹೊಡೆದು ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ.

ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡುಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಒಡೆದಿದೆ ಇದರಿಂದ ಮುಂಭಾಗದಲ್ಲಿದ್ದ ಬಾಲಕ  ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗುವಿಗೆ ಸಣ್ಣಪುಟ್ಟ ಗಾಯವಾಗಿದೆ. ಗಂಭೀರ ಗಾಯಗೊಂಡ ಮಗುವನ್ನು ಪುತ್ತೂರು ಆಸ್ಪತ್ರೆ ಕೊಂಡೊಯ್ಯಲಾಗಿದೆ.

ಗಂಭೀರ ಗಾಯಗೊಂಡಿರುವ ಬಾಲಕ  ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments