Home Page 11

ರೂಫಿಂಗ್ ಶೀಟ್ ಹಾಕುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ರಾಡ್ ಹಾಗೂ ಟೈಲ್ಸ್‍ನಿಂದ ಹಲ್ಲೆ

ಮಂಜೇಶ್ವರ: ಆವರಣ ಗೋಡೆಯನ್ನು ಕಬಳಿಸಿ ಮನೆ ಸಮೀಪದ ರೋಯಲ್ ಆರ್ಕೆಡ್ ಭಾವ ಹಿಂದೂಸ್ಥಾನಿ ಕಟ್ಟಡಕ್ಕೆ ರೂಫಿಂಗ್ ಶೀಟ್ ಹಾಕುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಅಲ್ಲಿದ್ದ ತಂಡ ತಂದೆ ಹಾಗೂ ಅಪ್ರಾಪ್ತ ಬಾಲಕನಿಗೆ ರಾಡ್ ಹಾಗೂ ಟೈಲ್ಸ್ ತುಂಡುಗಳಿಂದ ಹಲೆಗೈದ ಘಟನೆ ನಡೆದಿದೆ. ಉದ್ಯಾವರ ಮಾಡ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ವಾಸವಾಗಿರುವ ಅಬ್ದುಲ್ ರಶೀದ್ (46) ಹಾಗೂ

ಉಪ್ಪಿನಂಗಡಿ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.27 ರಂದು ನಡೆದಿದೆ.ರಾಮಣ್ಣ ಪೂಜಾರಿ ಎಂಬವರು ಕೆಲ ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದು, ಇಂದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ

ಲೈಂಗಿಕ ಕಿರುಕುಳ ಆರೋಪ :ಎಲ್ಯಾಸ್ ಪಿಂಟೋಗೆ ನ್ಯಾಯಾಂಗ ಬಂಧನ

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಬಂಧಿತ ಆರೋಪಿಯಾಗಿರುವ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರಿಗೆ ಪುತ್ತೂರು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ

ಹಾನಗಲ್ ಕ್ಷೇತ್ರದಲ್ಲಿ ಮಾಜಿ‌ ಸಚಿವ ರಮೇಶ್ ಜಾರಕಿಹೋಳಿ‌ ಬಿರುಸಿನ ಪ್ರಚಾರ

ಉಪ ಚುನಾವಣಾ ನಡೆಯುತ್ತಿರುವ ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ‌ಅಭ್ಯರ್ಥಿ ಪರವಾಗಿ ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರು ಸೋಮವಾರದಿಂದ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ. ಕ್ಷೇತ್ರದ ಎಲ್ಲಾ ಬ್ಲಾಕ್ , ವಾರ್ಡ್ ಗಳಿಗೂ ಪಾದಯಾತ್ರೆ ಮೂಲಕ ತೆರಲಿ ರಮೇಶ್ ಜಾರಕಿಹೋಳಿ ಮತ ಯಾಚನೆ‌ ನಡೆಸುತ್ತಿದ್ದಾರೆ.ಕ್ಷೇತ್ರದಾದ್ಯಂತ ಮತದಾರರನ್ನು ಭೇಟಿಯಾಗುತ್ತಿರುವ ರಮೇಶ್

ಸಿಲಂಬಂ ಸ್ಪರ್ಧೆಯಲ್ಲಿ ವೆನಿಲ್ಲಾ ಮಣಿಕಂಠರವರಿಗೆ ಚಿನ್ನದ ಪದಕ

ಬಂಟ್ವಾಳ: ವಿಶಾಖಪಟ್ಟಂನಲ್ಲಿ ಅ.21 ಮತ್ತು 22 ರಂದು ನಡೆದ ರಾಷ್ಟ್ರೀಯ ಮಟ್ಟದ ಪ್ರಾಚೀನ ಯುದ್ಧ ವಿದ್ಯೆ ಸಿಲಂಬಂ ಸ್ಪರ್ಧೆಯಲ್ಲಿ ವೆನಿಲ್ಲಾ ಮಣಿಕಂಠ ಅವರು ಭಾಗವಹಿಸಿ ಡಬಲ್ ಸ್ಟಿಕ್ ಹಾಗೂ ವಾಲ್ ವೀಚು ವಿಭಾಗದಲ್ಲಿ 2 ಚಿನ್ನದ ಪದಕವನ್ನು ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ ಅಲ್ಲದೆ ಮುಂದಿನ ಅಂತರಾಷ್ಟೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವೆನಿಲ್ಲಾ

ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಳ್ಳು ದೂರು ನೀಡಿದ್ದ ಪತ್ನಿ ಸೇರಿ ಐವರು ಅರೆಸ್ಟ್!

ಕುಂದಾಪುರ: ಇಲ್ಲಿನ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಅಂಪಾರಿನಲ್ಲಿ ಮಂಗಳವಾರದಂದು ಬೆಳಕಿಗೆ ಬಂದಿದ್ದ ವಿವಾಹಿತನೋರ್ವನ ಆತ್ಮಹತ್ಯೆ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಅಂಪಾರು ಗ್ರಾಮದ ಮೂಡುಬಗೆಯ ವಿವೇಕ ನಗರದ ನಿವಾಸಿ ನಾಗರಾಜ (36) ಕೊಲೆಯಾದ ದುರ್ದೈವಿ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಾಜ್

ಕುಂದಾಪುರ: ತಲವಾರಿನಿಂದ ಹಲ್ಲೆ: ಗಾಯಾಳು ಯುವಕರು ಆಸ್ಪತ್ರೆಗೆ ದಾಖಲು

ಕುಂದಾಪುರ: ಬಾರ್ ಮ್ಯಾನೇಜರೋರ್ವರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಜರಿಗಾಗಿ ಸ್ಥಳಕ್ಕೆ ತೆರಳಿದ್ದ ವೇಳೆ ಆರೋಪಿಗಳ ತಂಡ ಏಕಾಏಕಿಯಾಗಿ ತಲವಾರು ದಾಳಿ ನಡೆಸಿದ ಪರಿಣಾಮ ಇಬ್ಬರು ಯುವಕರು ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ.ತಲವಾರು ದಾಳಿಗೊಳಗೊಳಗಾದ ಕಾಲ್ತೋಡು ನಿವಾಸಿ ರವಿ ಶೆಟ್ಟಿ ಹಾಗೂ ಪ್ರಶಾಂತ್ ಶೆಟ್ಟಿ

ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾರತ ಯಶಸ್ವಿ: ಪ್ರಧಾನಿ ಮೋದಿ

ನಮ್ಮ ದೇಶ ಕರ್ತವ್ಯ ಪಾಲಿಸಿದೆ. ದೇಶಾದ್ಯಂತ 100 ಕೋಟಿ ಕೋವಿಡ್-19 ಲಸಿಕೆ ಡೋಸ್ ಮೈಲುಗಲ್ಲು ತಲುಪಲಾಗಿದೆ. ಇದು ಪ್ರತಿಯೊಬ್ಬ ಭಾರತೀಯನ ಯಶಸ್ಸು. ಇದರ ಪರಿಣಾಮ ಭಾರತ ಕೋವಿಡ್ ವಿರುದ್ಧದ ಹೋರಾಟದಲ್ಲಿ ಯಶಸ್ಸು ಪಡೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಹೇಳಿದರು. ದೇಶವನ್ನುದ್ದೇಶಿಸಿ ಮಾತನಾಡಿದ ಅವರು. ದೇಶದಲ್ಲಿ ನೂರು ಕೋಟಿ ಲಸಿಕೆ

ಹದಗೆಟ್ಟ ಕಾನ-ಕುಳಾಯಿ ರೈಲ್ವೆ ಸೇತುವೆ ದುರಸ್ತಿಗೆ ಡಿವೈಎಫ್‌ಐ ಪ್ರತಿಭಟನೆ

ಮಂಗಳೂರು : ಬೃಹತ್ ಘನ ವಾಹನಗಳ ಸಂಚಾರದಿಂದಾಗಿ ಕಾನ ಕುಳಾಯಿ ರೈಲ್ವೆ ಸೇತುವೆ ಸಂಪೂರ್ಣ ಹದಗೆಟ್ಟು ಹೋಗಿದ್ದು ಕೂಡಲೇ ದುರಸ್ಥಿ ಮಾಡಲು ಒತ್ತಾಯಿಸಿ ಡಿವೈಎಫ್‌ಐ ಕಾನ ಮತ್ತು ಕುಳಾಯಿ ಘಟಕಗಳ ನೇತೃತ್ವದಲ್ಲಿ ಇಂದು ಕುಳಾಯಿ ರೈಲ್ವೆ ಸೇತುವೆ ಮೇಲೆ ರಸ್ತೆತಡೆ ಪ್ರತಿಭಟನೆ ನಡೆಯಿತು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‌ಐ ರಾಜ್ಯ ಅಧ್ಯಕ್ಷರಾದ ಮುನೀರ್