ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸೀಟುಗಳನ್ನು ನೀಡುವುದಾಗಿ ಪ್ರಕಟಿಸಿದ್ದ ಜೆಡಿಎಸ್ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಅದಕ್ಕೆ ಮುನ್ನುಡಿ ಎಂಬಂತೆ ಸಿಂಧಗಿ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿಯನ್ನಾಗಿ ಶ್ರೀಮತಿ ನಾಜಿಯಾ ಶಕೀಲಾ ಅಂಗಡಿ ಅವರನ್ನು ಆಯ್ಕೆ ಮಾಡಿದ್ದಾರೆ. ಶ್ರೀಮತಿ
Images
ಬೀಚ್ ಫ್ರೆಂಡ್ಸ್,(ರಿ) ಹೆಜಮಾಡಿ ಇದರ ವತಿಯಿಂದ ಮಹಾತ್ಮ ಗಾಂಧಿ ಮತ್ತು ಲಾಲ್ ಬಹುದ್ದೂರು ಶಾಸ್ತ್ರೀ ಯವರ ಜನ್ಮದಿನಾಚರಣೆಯ ಅಂಗವಾಗಿ ಸಂಸ್ಥೆಯ ಅಧ್ಯಕ್ಷ ಶ್ರೀ ಅಮಿತ್ ಕುಮಾರ್ ನೇತ್ರತ್ವದಲ್ಲಿ ಸ್ವಚ್ಚ ಭಾರತ ಅಭಿಯಾನ ನಡೆಯಿತು. ಸರ್ವಸದಸ್ಯರು ಶ್ರೀ ಶನೀಶ್ವರ ಮಂಡಳಿ ಪರಿಸರ ಮತ್ತು ಬೀಚ್ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಮಂಗಳೂರು: ಮಹಾತ್ಮಾ ಗಾಂಧೀಜಿಯವರು ತಮ್ಮ ಜೀವನದುದ್ದಕ್ಕೂ ಅಹಿಂಸೆಯ ಜೊತೆ ಜೊತೆಗೆ ಸ್ವಚ್ಛತೆ ಹಾಗೂ ನೈರ್ಮಲೀಕರಣಕ್ಕೆ ಅತೀ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದರು. ಸ್ವಚ್ಛತೆ -ನೈರ್ಮಲೀಕರಣ ಒಂದು ಅಭಿಯಾನವಾಗಿ ದೇಶದಾದ್ಯಂತ ಜನರಲ್ಲಿ ಅರಿವು ಮೂಡಿಸುವುದು ಹಾಗೂ ಸ್ವಚ್ಛತಾ ಕ್ರಮಗಳನ್ನು ದೈನಂದಿನ ಜೀವನದಲ್ಲಿ ಅನುಸರಿಸುವುದು ಅವಶ್ಯಕವಾಗಿದೆ. ಆದ ಕಾರಣ ಅ. 2ರ
ಬಂಟ್ವಾಳ : ಪತ್ರಕರ್ತ,ಸಾಹಿತಿ ಫಾರೂಕ್ ಗೂಡಿನಬಳಿ( 38) ಅವರು ಸುದೀರ್ಘ ಕಾಲದ ಅಸೌಖ್ಯದಿಂದ ಶುಕ್ರವಾರ ಸಂಜೆ ಗೂಡಿನಬಳಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.ವಿವಿಧ ಪತ್ರಿಕೆಗಳಿಗೆ ಬಂಟ್ವಾಳದಿಂದ ವರದಿಗಾರನಾಗಿ ಕಾರ್ಯನಿರ್ವಹಿಸಿದ್ದರು. ಪಾಣೆಮಂಗಳೂರು ಸಮೀಪದ ಗೂಡಿನಬಳಿ ನಿವಾಸಿಯಾಗಿರುವ ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ವಿಟ್ಲ: ಕೊಳ್ನಾಡು ಗ್ರಾಮದ ಕೆ.ಪಿ ಬೈಲು ನಾರ್ಶ ಎಂಬಲ್ಲಿ ಮೀನಿನ ವ್ಯಾಪಾರಿಯೊಬ್ಬರನ್ನು ಅಪರಿಚಿತರ ತಂಡವೊಂದು ಅಪಹರಣ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಕೊಳ್ನಾಡು ಗ್ರಾಮದ ಕೆ ಪಿ ಬೈಲು ನಾರ್ಶ ನಿವಾಸಿ ಮಹಮ್ಮದ್ ಅನ್ಸಾರ್(34) ಅಪಹರಣಗೊಳಗಾದ ವ್ಯಕ್ತಿಯಾಗಿದ್ದು, ಈ ಬಗ್ಗೆ ಅವರ ಪತ್ನಿ ಅಪ್ಸ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು
ಕಾಂಗ್ರೆಸ್‌ನಿಂದಾಗಿ ಸಿಟಿ ರವಿ ಸಹಿತ ಬಿಜೆಪಿಯವರು ರಾಜ್ಯಭಾರ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ದೇಗುಲ ಧ್ವಂಸ ಮಾಡಿದ್ದು ತಾಲಿಬಾನ್ ಕೃತ್ಯ, ಇದು ಸಂವಿಧಾನ ವಿರೋಧಿ ಅಂದರು. ದೇವರ ಹೆಸರಿನಲ್ಲಿ ರಾಜಕೀಯ
ಮಂಗಳೂರು:ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ವೈದ್ಯ ವಿದ್ಯಾರ್ಥಿಗಳ ಮೇಲಿನ ದಾಳಿ ಪ್ರಕರಣವನ್ನು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಖಂಡಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲಿ ಯಾವನೋ ಒಬ್ಬ ರೌಡಿ ಹೊಡಿತಾನೆ ಅಂದರೆ
ಕಳೆದ 10 ತಿಂಗಳು ರೈತರು ಬೆಂಬಲ ಬೆಲೆ ಕಾಯ್ದೆಯಲ್ಲಿ ತರಬೇಕು ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದರೂ ಕೇಂದ್ರ ಸರಕಾರ ಮಾತ್ರ ಕಾಟಾಚಾರಕ್ಕಾಗಿ ರೈತ ಸಂಘಟನೆಗಳನ್ನು ಮಾತುಕತೆಗೆ ಆಹ್ವಾನಿಸುತ್ತದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು. ಅವರು ಬೈಂದೂರಿನ ಅಂಡರ್ ಪಾಸ್ ನಲ್ಲಿ ರೈತರ ಮೂರು ಕ್ರಷಿಕಾಯ್ದೆಗಳು,ಬೆಲೆ ಏರಿಕೆ,
ಉಳ್ಳಾಲ: ನಾಗುರಿ ಸಂಚಾರಿ ಠಾಣೆಯ ಕರ್ತವ್ಯ ನಿರ್ವಹಿಸುತ್ತಿದ್ದ ಲೇಡಿ ಹೋಂ ಗಾರ್ಡ್‍ಗೆ ಅಶ್ಲೀಲ ಹಾಗೂ ಅವಾಚ್ಯವಾಗಿ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ತೊಕ್ಕೊಟ್ಟು ಕಾಪಿಕಾಡು ಎಂಬಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಹಳೇಕೋಟೆ ನಿವಾಸಿ ಮಹಮ್ಮದ್ ಹಾಸೀರ್ ಮತ್ತು ನಯೀಮ್ ಬಂಧಿತರು. ಇಬ್ಬರು
ಮೀನುಗಾರಿಕೆಗೆ ತೆರಳಿದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದು ಮೃತಪಟ್ಟ ಘಟನೆ ಕಾಪು ಕಡಲ ಕಿನಾರೆಯಲ್ಲಿ ನಡೆದಿದೆ.ಮೃತ ವ್ಯಕ್ತಿ ಹೆಜಮಾಡಿ ಪಡುಕರೆ ಕೋಚ ಹೌಸ್ ನಿವಾಸಿ ಸಂತೋಷ್ (36) ವಿವಾಹಿತರಾಗಿದ್ದ ಇವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದು, ಸೈಕಲ್ ರಿಪೇರಿ ಹಾಗೂ ನೆಗರುಬಲೆ ಮೀನುಗಾರಿಕೆಯನ್ನು ನಂಬಿ ಜೀವನ ಸಾಗಿಸುತ್ತಿದ್ದ ಇವರ


















