HomeFresh Newsವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾದ ಮಂಗಳೂರಿನ ಶಾಸಕ || U. T. Khader

ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾದ ಮಂಗಳೂರಿನ ಶಾಸಕ || U. T. Khader

ವಿಧಾನಸಭೆ ಸಭಾಪತಿ ಸ್ಥಾನಕ್ಕೆ ಮಾಜಿ ಸಚಿವ, ಮಂಗಳೂರಿನ ಶಾಸಕ ಯು.ಟಿ ಖಾದರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

UT khader Speaker

ಮಂಗಳವಾರ ಬೆಳಗ್ಗೆ ಯು.ಟಿ ಖಾದರ್ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿಗೆ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ಖಾದರ್ ಅವರನ್ನು ಹೊರತುಪಡಿಸಿ ಮತ್ತ್ಯಾರೂ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

UT khader Speaker

ಮೊದಲಿಗೆ ಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅದನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅನುಮೋದಿಸಿದರು. ಬಳಿಕ ಖಾದರ್ ಆಯ್ಕೆಯನ್ನು ಹಂಗಾಮಿ ಸ್ಪೀಕರ್ ಆರ್.ವಿ ದೇಶಪಾಂಡೆ ಸದನದಲ್ಲಿ ಪ್ರಕಟಿಸಿದರು. ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತು ಖಾದರ್ ಕಾರ್ಯಾರಂಭ ಮಾಡಿದರು. ಅವರಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲ ಪಕ್ಷದ ನಾಯಕರು ಅಭಿನಂದಿಸಿ ಶುಭ ಕೋರಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments