ಶ್ರೀ ಕ್ಷೇತ್ರ ಉಚ್ಚಿಲಕ್ಕೆ ಖ್ಯಾತ ಹೋಟೆಲ್ ಉದ್ಯಮಿ ಬಂಜಾರ ಪ್ರಕಾಶ್ ಶೆಟ್ಟಿ ಭೇಟಿ

ಶ್ರೀ ಕ್ಷೇತ್ರ ಉಚ್ಚಿಲಕ್ಕೆ ಖ್ಯಾತ ಹೋಟೆಲ್ ಉದ್ಯಮಿಗಳಾದ ಶ್ರೀ ಬಂಜಾರ ಪ್ರಕಾಶ್ ಶೆಟ್ಟಿಯವರು ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಮಾಡಿದರು. ದೇವಸ್ಥಾನದ ಜೀರ್ಣೋದ್ಧಾರ ಸಂದರ್ಭದಲ್ಲಿ ರೂ.25 ಲಕ್ಷ ದೇಣಿಗೆ ನೀಡಿದ ಇವರಿಗೆ ನಾಡೋಜ ಡಾ. ಜಿ. ಶಂಕರ್ ರವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ. ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾದ ಶ್ರೀ ವಾಸುದೇವ ಸಾಲ್ಯಾನ್, ಉದ್ಯಮಿ ಶ್ರೀಪತಿ ಭಟ್ ಮುಂತಾದವರು ಉಪಸ್ಥಿತರಿದ್ದರು