ಉಚ್ಚಿಲ: ಮಹಾಲಕ್ಷ್ಮೀ ದೇವಳಕ್ಕೆ ವಿದ್ಯುತ್ ಚಾಲಿತ ವಾಹನ ಹಸ್ತಾಂತರ
ಕರ್ನಾಟಕ ಬ್ಯಾಂಕಿನ ಸಿ.ಎಸ್.ಆರ್. ನಿಧಿಯಡಿ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕೊಡಮಾಡಿದ 5,20,750ರೂ. ವೆಚ್ಚದ 6 ಆಸನಗಳ ವಿದ್ಯುತ್ ಚಾಲಿತ ವಾಹನವನ್ನು ಬ್ಯಾಂಕಿನ ಅಧಿಕಾರಿಗಳು ದ. ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ಅವರಿಗೆ ಹಸ್ತಾಂತರಿಸಿದರು.
ವಾಹನವನ್ನು ಸ್ವೀಕರಿಸಿದ ನಾಡೋಜ ಡಾ| ಜಿ. ಶಂಕರ್ ಮಾತನಾಡಿ, ದ.ಕ. ಮೊಗವೀರ ಮಹಾಜನ ಸಂಘ ಮತ್ತು ಕ್ಷೇತ್ರಾಡಳಿತ ಮಂಡಳಿ ಮೂಲಕ ನಾವು ಮಾಡಿಕೊಂಡಿರುವ ಮನವಿಗೆ ಸ್ಪಂದಿಸಿರುವ ಕರ್ಣಾಟಕ ಬ್ಯಾಂಕ್, ಭಕ್ತರ ವಿದ್ಯುತ್ ಚಾಲಿತ ವಾಹನವನ್ನು ಕೊಟ್ಟಿರುವುದು ಸ್ವಾಗತಾರ್ಹವಾಗಿದೆ.
ವೇ. ವಿಷ್ಣುಮೂರ್ತಿ ಉಪಾಧ್ಯಾಯರು ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು.
ಬ್ಯಾಂಕಿನ ಉಡುಪಿ ಪ್ರಾದೇಶಿಕ ಕಚೇರಿಯ ಮುಖ್ಯ ಮಹಾಪ್ರಬಂಧಕ ವಾದಿರಾಜ ಭಟ್, ಬ್ಯಾಂಕಿನ ಪ್ರಾದೇಶಿಕ ಕಚೇರಿಯ ಮಹಾಪ್ರಬಂಧಕ ಮನೋಜ್ ಕೋಟ್ಯಾನ್, ಅಂಬಾಗಿಲು ಶಾಖೆಯ ಪ್ರಬಂಧಕ ಶಶಿಕಾಂತ್ ಬಂಗೇರ, ಮಹಾಲಕ್ಷ್ಮೀದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ದ.ಕ. ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷ ಮೋಹನ ಬೇಂಗ್ರೆ ಪ್ರಧಾನ ಕಾರ್ಯದರ್ಶಿ ಶರಣ್ ಮಟ್ಟು ಉಚ್ಚಲ ದಸರಾ ಸಮಿತಿ ಅಧ್ಯಕ್ಷ ವಿನಯ್ ಕರ್ಕೇರ ಮಲೈ ಮೊದಲಾದವರು ಉಪಸ್ಥಿತರಿದ್ದರು.