ಉಚ್ಚಿಲ: ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಹಿರಿಯ ನಟ ಜೈ ಜಗದೀಶ್ ದಂಪತಿ ಭೇಟಿ
ಉಚ್ಚಿಲ ಶ್ರೀ ಮಾಹಲಕ್ಷ್ಮೀ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಹಿರಿಯ ನಟ ಜೈ ಜಗದೀಶ್ ದಂಪತಿ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.
ಶ್ರೀ ಕ್ಷೇತ್ರದ ವತಿಯಿಂದ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆ ಹಾಗೂ ಪ್ರಸಾದ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಗಿರಿಧರ್ ಸುವರ್ಣ, ಪ್ರಧಾನ ಅಚರ್ಕರಾದ ರಾಘವೇಂದ್ರ ಉಪಾಧ್ಯಾಯ ಹಾಗೂ ಅನೇಕ ಸದಸ್ಯರು ಉಪಸ್ಥಿತರಿದ್ದರು.


















