HomeFresh Newsಉಚ್ಚಿಲ : ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ ಏಳು ಮಂದಿ ಮೀನುಗಾರರ ರಕ್ಷಣೆ

ಉಚ್ಚಿಲ : ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ ಏಳು ಮಂದಿ ಮೀನುಗಾರರ ರಕ್ಷಣೆ

ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು, 7 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಉಚ್ಚಿಲದಲ್ಲಿ ನಡೆದಿದೆ.

uhila

ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ಉಚ್ಚಿಲದ ನಿವಾಸಿ ವಿಮಲಾ ಸಿ ಪುತ್ರನ್ ಮಾಲಕತ್ವದ ಶ್ರೀ ಗಿರಿಜಾ ದೋಣಿಯು ಸೋಮವಾರ ಬೆಳಗ್ಗೆ ಸಮುದ್ರದಲ್ಲಿ ಮುಳುಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ನಡೆದಿದೆ. ಸೋಮವಾರ ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ ಉಚ್ಚಿಲದ ಶ್ರೀ ಗಿರಿಜಾ ದೋಣಿಯಲ್ಲಿ 7 ಮಂದಿ ಮೀನುಗಾರಿಕೆಗೆ ತೆರಳಿದ್ದರು. ಚಂಡಮಾರುತದ ಪ್ರಭಾವದಿಂದಾಗಿ ಸಮುದ್ರ ಪ್ರಕ್ಷುಬ್ದಗೊಂಡು ದೋಣಿ ಮುಳುಗಿದೆ. ಬೇರೆ ದೋಣಿಗಳಲ್ಲಿ ಮೀನುಗಾರಿಕೆ ಮಾಡುತ್ತಿದ್ದ ದೋಣಿಯವರು 7 ಮಂದಿಯನ್ನು ರಕ್ಷಣೆ ಮಾಡಿದ್ದಾರೆ.
ದೋಣಿಯಲ್ಲಿದ್ದ ಬಲೆ ಹಾಗೂ ಹೈ ಸ್ಪೀಡ್ ಇಂಜಿನ್ ಸಮುದ್ರ ಪಾಲಾಗಿದ್ದು, ದೋಣಿಗೆ ಹಾನಿ ಉಂಟಾಗಿದೆ.ಘಟನೆಯಲ್ಲಿ ಸುಮಾರು ಆರೂವರೆ ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಮಾಲೀಕರು ಪಡುಬಿದ್ರಿ ಠಾಣೆಗೆ ದೂರು ನೀಡಿದ್ದಾರೆ .

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments