ಸಾವಿಗೆ ಕಾರಣವಾಗಿ ಪರಾರಿಯಾಗಿದ್ದ ಲಾರಿ ಪತ್ತೆ : ಕಾಪು ಸರ್ಕಲ್ ಇನ್ಸ್‍ಪೆಕ್ಟರ್ ತಂಡದ ತ್ವರಿತ ಕಾರ್ಯಚರಣೆ

ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಸಮೀಪ ತಂದೆ ಮಗನಿಗೆ ಡಿಕ್ಕಿಯಾಗಿ ತಂದೆಯ ಸಾವಿಗೆ ಕಾರಣವಾಗಿ ಪರಾರಿಯಾಗಿದ್ದ ಲಾರಿಯನ್ನು ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪೂವಯ್ಯ ಹಾಗೂ ಪಡುಬಿದ್ರಿ ಎಸ್ಸೈ ಪುರುಷೋತ್ತಮ ತಂಡದ ತ್ವರಿತ ಕಾರ್ಯಚರಣೆಯಿಂದ ಮೂಡಬಿದರೆ ಬಳಿ ತಡೆದು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದು ಸಾರ್ವಜನಿಕ ವಲಯದಲ್ಲಿ ಬಾರೀ ಪ್ರಶಂಸೆಗೆ ಪಾತ್ರರಾಗಿದ್ದಾರೆ.ಬೆಳಗಾವಿಯಿಂದ ಬಸ್ಸಿನಲ್ಲಿ ಬಂದು ಬಸ್ಸಿಳಿದು ರಸ್ತೆ ಬದಿಯಲ್ಲಿ ನಿಂತಿದ್ದ ತಂದೆ ಮಗನಿಗೆ ಡಿಕ್ಕಿಯಾದ ಪರಿಣಾಮ ತಂದೆಯ ದೇಹ ಲಾರಿಯಡಿಗೆ ಬಿದ್ದು ಛಿದ್ರಗೊಂಡರೆ, ಮಗ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ.ಲಾರಿ ಮಹಾರಾಷ್ಟ್ರದ ಸೂರತ್ ನಿಂದಲೂ 120 ಕೀ.ಮೀ. ದೂರದಿಂದ ಪ್ಲಾಸ್ಟಿಕ್ ಸಲಕರಣೆ ಮಾಡುವ ಕಚ್ಚಾವಸ್ತುಗಳನ್ನು ಹೇರಿಕೊಂಡು ಮೂಡಬಿದರೆ ಸಮೀಪದ ಗಂಜಿಮಠ ಎಂಬಲ್ಲಿನ ಫ್ಯಾಕ್ಟರಿಗೆ ಕಳೆದ ಮೂರು ದಿನಗಳ ಹಿಂದೆ ಹೊರಟಿದ್ದು, ಬುಧವಾರ ಮುಂಜಾನೆ ಆರರ ಸುಮಾರಿಗೆ ಉಚ್ಚಿಲ ಬಳಿ ಬರುತ್ತಿದ್ದಂತೆ ಚಾಲಕನ ನಿದ್ದೆಯ ಮಂಪರಿನಿಂದಾಗಿ ಲಾರಿ ರಸ್ತೆ ಬಿಟ್ಟು, ಬಸ್ಸಿಳಿದು ನಿಂತಿದ್ದ ಮಣ್ಣರಸ್ತೆಯಲ್ಲಿ ನಿಂತಿದ್ದ ತಂದೆ ಮಗನಿಗೆ ಡಿಕ್ಕಿಯಾಗಿ ಪರಾರಿಯಾಗಿತ್ತು. ಸ್ಥಳಕ್ಕೆ ಬಂದ ಪೋಲೀಸರು ಲಾರಿಯ ಪತ್ತೆಗಾಗಿ ಕಾರ್ಯಚರಣೆ ಆರಂಭಿಸಿ ಕೆಲವೇ ಗಂಟೆಗಳಲ್ಲಿ ಮೂಡಬಿದರೆ ಬಳಿ ಹದಿನಾಲ್ಕು ಚಕ್ರ ಹೊಂದಿದ್ದ ಬ್ರಹತ್ ಲಾರಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಲಾರಿ ಸಹಿತ ಚಾಲಕ ಪಡುಬಿದ್ರಿ ಪೋಲೀಸರ ವಶದಲ್ಲಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

URO HEALTH PLUS

Related Posts

Leave a Reply

Your email address will not be published.