ಉಚ್ಚಿಲ ವೈಭವದ ದಸರಾ ಮೆರವಣಿಗೆ : ಹೆಲಿಕಾಪ್ಟರ್ ಮೂಲಕ ಶಾರದ ಮಾತೆಗೆ ಪುಷ್ಪರ್ಚನೆ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮತ್ತು ಉಚ್ಚಿಲ ದಸರಾ ಉತ್ಸವದ ಪ್ರಯುಕ್ತ ವೈಭವದ ದಸರಾ ಶೋಭಾ ಯಾತ್ರೆ ನಡೆಯಿತು.

ಕ್ಷೇತ್ರದ ಪ್ರಧಾನ ತಂತ್ರಿ ವೇ.ಮೂ. ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಮತ್ತು ಪ್ರಧಾನ ಅರ್ಚಕ ವೇ.ಮೂ. ರಾಘವೇಂದ್ರ ಉಪಾಧ್ಯಾಯ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ವೈಭವದ ದಸರಾ ಮೆರವಣಿಗೆಯಲ್ಲಿ ವಿವಿಧ ಬಗೆಯ ವೈವಿಧ್ಯಮಯ ಗಮನಸೆಳೆಯುತ್ತಿದ್ದು ಚಾಲನೆ ವೇಳೆ ಹೆಲಿಕಾಪ್ಟರ್ ಮೂಲಕ ನವ ದುರ್ಗೆಯರು ಹಾಗೂ ಶಾರದಮೂರ್ತಿಗೆ ಪುಷ್ಪಾರ್ಚನೆಗೈಯಲಾಯಿತು..

ಈ ಸಂದರ್ಭ ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಡಾ. ಜಿ. ಶಂಕರ್, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಅಮೀನ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಉದ್ಯಮಿ ಭುವನೇಂದ್ರ ಕಿದಿಯೂರು, ದ.ಕ. ಮೊಗವೀರ ಮಹಾಜನ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು, ಸಮಾಜ ಭಾಂದವರು, ಲಕ್ಷಾಂತರ ಮಂದಿ ಭಕ್ತಾಧಿಗಳು ಪಾಲ್ಗೊಂಡಿದ್ದರು.