ಬೈಂದೂರು ತಾಲೂಕು ಆಡಳಿತದ ವತಿಯಿಂದ ಉಡುಪಿ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮ

ಜಿಲ್ಲೆಯ ಆಧ್ಯಾತ್ಮಿಕ, ಧಾರ್ಮಿಕ ತಳಗಟ್ಟಿನಲ್ಲಿನ ಸಾಂಸ್ಕøತಿಕ ಶ್ರೀಮಂತಿಕೆಯನ್ನು ಹೊಸ ಪೀಳಿಗೆಗೆ ಪರಿಚಯಿಸಿ ರಾಷ್ಟ್ರಮಟ್ಟಕ್ಕೆ ವಿಸ್ತರಿಸಬೇಕು ಎಂದು ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕøತಿ ಖಾತೆ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

udupi

ಅವರು ಬೈಂದೂರು ತಾಲೂಕು ಆಡಳಿತದ ವತಿಯಿಂದ ಉಡುಪಿ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮವನ್ನು ನಾಗೂರು ಶ್ರೀಗೋಪಾಲಕೃಷ್ಣ ಕಲಾಮಂದಿರದಲ್ಲಿ ಉದ್ಘಾಟಿಸಿ ಮಾತನಾಡಿದರು.

1997 ರಲ್ಲಿ ಘೋಷಣೆಯಾದ ಹೊಸ ಜಿಲ್ಲೆಗಳ ನಡೆದಿರುವ ಅಭಿವೃದ್ದಿಗೆ ಹೋಲಿಸಿದಲ್ಲಿ, ಉಡುಪಿ ಜಿಲ್ಲೆ 20 ವರ್ಷ ಮುಂದಿದ್ದು, ಸ್ಟಾರ್ಟಪ್ ಇಂಡಿಯಾ ಯೋಜನೆಯಡಿ ಹೊಸ ಹೊಸ ಆವಿಷ್ಕಾರ, ಉದ್ಯಮ ಸ್ಥಾಪನೆ ಹೆಚ್ಚಬೇಕು. ಮುಂದಿನ 25ವರ್ಷಗಳ ಅಭಿವೃದ್ಧಿ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದ ಅಧಿಕಾರಿಗಳಿಂದ ನೀಲನಕಾಶೆ ತಯಾರಿಸಬೇಕು ಎಂದರು.

ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ, ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ 2,000ಕೋಟಿ ರೂ. ಅನುದಾನವನ್ನು ಸರಕಾರದಿಂದ ತಂದು ತೊಡಗಿಸಿದ್ದು ಒತ್ತಿನೆಣೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ, ಉಡುಪಿ ಜಿಲ್ಲೆಗೊಂದು ಸರಕಾರಿ ವೈದ್ಯಕೀಯ ಕಾಲೇಜಿನ ಅಗತ್ಯವನ್ನು ಪ್ರತಿಪಾದಿಸಿದರು. ಭಕ್ತರು, ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದು ಮೂಲಭೂತ ಸೌಲಭ್ಯಗಳ ಮತ್ತಷ್ಟು ಅಭಿವೃದ್ಧಿಯ ಅಗತ್ಯವಿದೆ ಎಂದರು.

ಉಡುಪಿ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನಿರ್ದೇಶಕ ಮಿಥುನ್ ಆರ್. ಹೆಗ್ಡೆ, ಜಿಲ್ಲಾಕಾರಿ ಕೂರ್ಮಾ ರಾವ್ ಎಂ., ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಕಾರಿ ಪ್ರಸನ್ನ ಎಚ್. ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಕೆ. ರಾಜು, ಮಾಜಿ ಶಾಸಕರಾದ ಗೋಪಾಲ್ ಪೂಜಾರಿ ,ಕಿರಿಮಂಜೇಶ್ವರ ಗ್ರಾ.ಪಂ. ಅಧ್ಯಕ್ಷೆ ಗೀತಾ, ಬೈಂದೂರು ತಹಸೀಲ್ದಾರ್ ಶ್ರೀಕಾಂತ ಎಸ್. ಹೆಗ್ಡೆ, ಬೈಂದೂರು ತಾ. ಪಂ. ಕಾರ್ಯನಿರ್ವಹಣಾಕಾರಿ ಭಾರತಿ ಉಪಸ್ಥಿತರಿದ್ದರು.

Related Posts

Leave a Reply

Your email address will not be published.