ಉಡುಪಿ : ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡ ಯುವಕನ ಅಂಗಾಂಗ ದಾನ

ಉಡುಪಿಯಲ್ಲಿ ಅಕ್ಟೋಬರ್ 9ರಂದು ನಡೆದಿದ್ದ ರಸ್ತೆ ಅಪಘಾತದಲ್ಲಿ ಎಂಐಟಿ ವಿದ್ಯಾರ್ಥಿ ಶ್ರೀ ವೆಮುಲಾ ಸುದರ್ಶನ್ ಚೌಧರಿ ಅವರಿಗೆ ಗಂಭೀರವಾದ ಗಾಯಗಳಾಗಿದ್ದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಮೆದುಳು ನಿಷ್ಕ್ರೀಯಗೊಂಡ ಯುವಕ ಅಂಗಾಂಗಳನ್ನು ಕುಟುಂಬಸ್ಥರು ದಾನ ಮಾಡಲು ನಿರ್ಧರಿಸಿದ್ದರು, ಅಂತೆಯೇ ಅಂಗಾಂಗಗಳನ್ನು ದಾನ ಮಾಡುವ ಪಕ್ರಿಯೆ ನಡೆಯಿತು.

ಮಣಿಪಾಲ ಆಸ್ಪತ್ರೆಯ ವೈದ್ಯರು ಶ್ರೀ ವೆಮುಲಾ ಸುದರ್ಶನ್ ಚೌಧರಿ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಅವರು ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ . ಶ್ರೀ ವೆಮುಲಾ ಸುದರ್ಶನ್ ಚೌಧರಿ ಅವರ ತಂದೆ ಮತ್ತು ಅವರ ಕುಟುಂಬ ಸದಸ್ಯರು ಇತರ ರೋಗಿಗಳ ಜೀವ ಉಳಿಸಲು ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು. ತರುವಾಯ ಮಾನವ ಅಂಗಾಂಗ ಕಸಿ ಕಾಯ್ದೆ 1994 ರ ಅನುಸಾರ ಶ್ರೀ ವೆಮುಲಾ ಸುದರ್ಶನ್ ಚೌಧರಿ ಅವರನ್ನು 6 ಗಂಟೆಗಳ ಅಂತರದಲ್ಲಿ ಎರಡು ಬಾರಿ ಪರಿಶೀಲಿಸಿ, ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ಘೋಷಿಸಿದರು.

ಜೀವನಸಾರ್ಥಕತೆ ಪ್ರೋಟೋಕಾಲ್‍ಗಳು ಮತ್ತು ನಿರ್ಧಾರಗಳ ಪ್ರಕಾರ, ನೋಂದಾಯಿತ ರೋಗಿಗಳಿಗೆ, ಯಕೃತ್ತು ಕೆಎಂಸಿ ಆಸ್ಪತ್ರೆ ಅಂಬೇಡ್ಕರ್ ಸರ್ಕಲ್ ಮಂಗಳೂರಿಗೆ, ಶ್ವಾಸಕೋಶ ಆಸ್ಟರ್ ಆಸ್ಪತ್ರೆ ಬೆಂಗಳೂರಿಗೆ, ಒಂದು ಮೂತ್ರಪಿಂಡ ಎಜೆ ಆಸ್ಪತ್ರೆ ಮಂಗಳೂರಿಗೆ ಕಳುಹಿಸಿಕೊಡಲಾಯಿತು. ಎರಡು ಕಾರ್ನಿಯಾಗಳು/ಕಣ್ಣುಗುಡ್ಡೆಗಳು, ಒಂದು ಮೂತ್ರಪಿಂಡ ಮತ್ತು ಚರ್ಮ ವನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರೋಗಿಗಳಿಗೆ ಬಳಸಲಾಯಿತು.

ಶ್ರೀ ವೆಮುಲ ಅಲೇಖಾ ಪ್ರಸಾದ್ ಮತ್ತು ಕುಟುಂಬ ಸದಸ್ಯರು “ಅಂಗದಾನ ಒಂದು ಪುಣ್ಯದ ಕೆಲಸ. ಸುದರ್ಶನ್ ಅಂಗದಾನ ಮಾಡಿ ತನ್ನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ ” ಎಂದು ತಿಳಿಸಿದ್ದಾರೆ.

ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ “ಜೀವ ಉಳಿಸುವ ನಿಟ್ಟಿನಲ್ಲಿ ಅಂಗದಾನ ಶ್ರೇಷ್ಟವಾದ ಕೆಲಸವಾಗಿದ್ದು, ಅತ್ಯಂತ ಮಹತ್ವವನ್ನು ಪಡೆದಿದೆ. ಎಂದು ತಿಳಿಸಿ ಅಂಗ ದಾನ ಮಾಡಲು ನಿರ್ಧರಿಸಿದ ಶ್ರೀ ವೆಮುಲಾ ಸುದರ್ಶನ್ ಚೌಧರಿ ಕುಟುಂಬಕ್ಕೆ ಕ್ರತಜ್ಞತೆ ಸಲ್ಲಿಸಿದರು. “ಅಂಗಾಂಗ ದಾನದ ಬಗ್ಗೆ ಸಾರ್ವಜನಿಕರಲ್ಲಿ ದಿನದಿಂದ ದಿನಕ್ಕೆ ಜಾಗೃತಿ ಹೆಚ್ಚಾಗುತ್ತಿರುವುದು ಒಳ್ಳೆಯ ಸಂಗತಿ.” ಎಂದು ಅಭಿಪ್ರಾಯಪಟ್ಟರು.

ದಾನ ಮಾಡಿದ ಅಂಗಗಳನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಪೊಲೀಸ್ ಇಲಾಖೆಯ ಬೆಂಬಲದೊಂದಿಗೆ ಮಣಿಪಾಲದಿಂದ ಮಂಗಳೂರಿಗೆ ಮತ್ತು ಬೆಂಗಳೂರಿಗೆ ಗ್ರೀನ್ ಕಾರಿಡಾರ್ ಮೂಲಕ ಸ್ವೀಕರಿಸುವ ಆಸ್ಪತ್ರೆಗೆ ವರ್ಗಾಯಿಸಲಾಯಿತು.

Related Posts

Leave a Reply

Your email address will not be published.