ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿಯ ವಿಶೇಷ ಸಭೆ

ಉಡುಪಿ ಜಿಲ್ಲಾ ಸಮಿತಿಯ ವಿಶೇಷ ಸಭೆಯು ಉಚ್ಚಿಲದ ಏಸ್.ಡಿ.ಪಿ.ಐ. ಕಚೇರಿಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷರಾದ ಮಜೀದ್ ಮೈಸೂರು ಅವರು ವಹಿಸಿದ್ದರು. ಸಭೆಯಲ್ಲಿ ಮುಂಬರುವ ಚುನಾವಣೆಯನ್ನು ದೂರ ದೃಷ್ಟಿಯಲ್ಲಿ ಇಟ್ಟು ಕೊಂಡು ಪಕ್ಷವನ್ನು ಭೂತ್ ಮಟ್ಟದಿಂದ ಸಂಘಟಿಸುವ ಬಗ್ಗೆ ಚರ್ಚೆ ವಿಮರ್ಶೆಗಳು ನಡೆದವು. ಅದಕ್ಕಾಗಿ ಕಾರ್ಯಕರ್ತರು ಈಗಿಂದಲೇ ಕಾರ್ಯಪ್ರವೃತ್ತರಾಗಿ ಕೆಲಸಗಳನ್ನು ಮಾಡಬೇಕು ಎಂದು ರಾಜ್ಯಾಧ್ಯಕ್ಷರು ಕಿವಿಮಾತು ಹೇಳಿದರು.
ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಮತ್ತು ಕ್ಷೇತ್ರ ಸಮಿತಿಯ ಪದಾಧಿಕಾರಿಗಳು ಇದರ ಬಗ್ಗೆ ತುಂಬಾ ಗಮನವಹಿಸಿ ಕೆಲಸವನ್ನು ಬೂತ್ ಮಟ್ಟದ ಕಾರ್ಯಕರ್ತರಿಂದ ಪ್ರಾರಂಭಿಸಿ ನಿರ್ವಹಿಸಬೇಕು ಎಂದು ಹೇಳಿದರು. ಸಭೆಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಅತಾವುಲ್ಲ ಜೋಕಟ್ಟೆ,, ಉಡುಪಿ ಜಿಲ್ಲಾ ಅಧ್ಯಕ್ಷರಾದ ಶಾಹಿದ್ ಅಲಿ, ಉಪಾಧ್ಯಕ್ಷರಾದ ಖಲೀಲ್ ಉಡುಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಅಶ್ರಫ್ ಭಾವ, ಕಾರ್ಯದರ್ಶಿವರಾದ ವಾಹಿದ್ ಬಸ್ರೂರು, ಜಿಲ್ಲಾ ಮತ್ತು ಕ್ಷೇತ್ರ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.