ಉಡುಪಿ : ವಿದ್ಯಾರ್ಥಿನಿ ನಿಖಿತ ಸಾವು ಪ್ರಕರಣ : ಆಸ್ಪತ್ರೆಯ ಮುಂಭಾಗದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಕೆಮ್ಮುಂಡೇಲಿನ ನಿಖಿತ ಎಂಬ ವಿದ್ಯಾರ್ಥಿನಿಯ ಸಾವಿಗೆ ಉಡುಪಿಯ ಸಿಟಿ ಆಸ್ಪತ್ರೆಯ ವೈದ್ಯರೇ ಕಾರಣ ಎಂದು ಆರೋಪಿಸಿ ಎಬಿವಿಪಿ ವಿದ್ಯಾರ್ಥಿಗಳು ಆಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ನಿಖಿತ ವಿಪರೀತ ವಾಂತಿಯಿಂದ ಬಳಲಿ ಅಸ್ವಸ್ಥಗೊಂಡು ಉಡುಪಿಯ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ನಿಖಿತ ಮೃತ ಪಟ್ಟಿದ್ದಾರೆ. ನಿಖಿತ ಸಾವು ಪ್ರಕರಣ ವಿಚಾರವಾಗಿ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ ವತಿಯಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ನಿಖಿತ ಸಾವಿಗೀಡಾದ ಸಿಟಿ ಹಾಸ್ಪಿಟಲ್‍ಗೆ ಮುತ್ತಿಗೆ ಹಾಕಲು ಯತ್ನ ನಡೆಸಲಾಯಿತು. ಆದರೆ ಎಬಿವಿಪಿ ವಿದ್ಯಾರ್ಥಿಗಳನ್ನು ಪೆÇಲೀಸರು ರಸ್ತೆಯಲ್ಲೇ ತಡೆದು ನಿಲ್ಲಿಸಿದ್ದಾರೆ.
ಈ ವೇಳೆ ಪೆÇಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು. ನಿಖಿತ ಸಾವಿಗೆ ಆಸ್ಪತ್ರೆಯ ನಿರ್ಲಕ್ಷ್ಯವೇ ಕಾರಣ ಎಂದು ಆಕೆಯ ಚಿಕ್ಕಮ್ಮ ಶೈಲಜಾ ಆರೋಪಿಸಿದ್ದು, ನಿಖಿತಾಳ ಆರೋಗ್ಯ ಸ್ಥಿತಿ ಗಂಭೀರವಾದರೂ ಆಸ್ಪತ್ರೆಯ ವೈದ್ಯರು ಬೇರೊಂದು ಆಸ್ಪತ್ರೆಗೆ ಕರೆದೊಯ್ಯಲು ಬಿಡದಿರುವ ಕುರಿತು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.